ರಾಜ್ಯದಲ್ಲಿ ಜ.31ರಿಂದ ನೈಟ್ ಕರ್ಫ್ಯೂ ರದ್ದು…

69
firstsuddi

ಬೆಂಗಳೂರು : ಜನವರಿ 31ರಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ರದ್ದು ಮಾಡಿರುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಅವರು ತಿಳಿಸಿದ್ದಾರೆ.

ಕೋವಿಡ್ ನಿರ್ಬಂಧಗಳ ಸಡಿಲಿಕೆ ಸಂಬಂಧ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಲಾಯಿತು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ನೈಟ್ ಕರ್ಫ್ಯೂ ಜನವರಿ 31 ರಿಂದ ಇರಲ್ಲ. ಪಬ್ ಆ್ಯಂಡ್ ರೆಸ್ಟೋರೆಂಟ್, ಹೋಟೆಲ್ ಗಳಿಗೆ ಶೆ. 100 ರಷ್ಟು ಅವಕಾಶ ನೀಡಲಾಗಿದೆ. ಸಿನಿಮಾ ಥಿಯೇಟರ್ ಗಳಿಗೆ ಶೇ. 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಅಂತ ತಿಳಿಸಿದರು.

ಮದುವೆಗಳಿಗೆ ಒಳಾಂಗಣದಲ್ಲಿ 200 ಜನರಿಗೆ, ಹೊರಾಂಗಣದಲ್ಲಿ 300 ಜನರಿಗೆ ಅವಕಾಶ ನೀಡಲಾಗಿದೆ. ಮಂದಿರ, ಮಸೀದಿ, ಚರ್ಚ್ ಗಳಲ್ಲಿ ಸೇವೆ ಪುನಾರಂಭ ಮಾಡಬಹುದು. ಆದರೆ ಧಾರ್ಮಿಕ ಸ್ಥಳಗಳಲ್ಲಿ 50 ಜನ ಮಾತ್ರ ಒಂದೇ ಬಾರಿ ದರ್ಶನ ಪಡೆಯಬಹುದು. ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ ಹೇರಲಾಗಿದೆ. ಜಿಮ್, ಈಜುಕೊಳದಲ್ಲಿ ಶೇ. 50 ರಷ್ಟು ಅವಕಾಶ ನೀಡಲಾಗಿದೆ ಎಂದು ಹೇಳಿದರು.