ಬಿಜೆಪಿ ಸರ್ಕಾರ ಮೂರುವರೆ ವರ್ಷ ಅಧಿಕಾರ ಪೂರೈಸಬೇಕೆ? ಬೇಡವೇ? ಎಂದು ನಿರ್ಧರಿಸುವುದು ರಾಜ್ಯದ ಜನತೆ ಹೆಚ್.ಡಿ. ಕುಮಾರಸ್ವಾಮಿ ಅಲ್ಲ : ಬಿ.ಎಸ್. ಯಡಿಯೂರಪ್ಪ.

215
firstsuddi

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರಕ್ಕೆ ಉಪಚುನಾವಣೆವರೆಗೆ ಮಾತ್ರ ಆಯುಷ್ಯ ಎಂಬ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿರುಗೇಟು ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಸರ್ಕಾರದ ಆಯುಷ್ಯ ಕುರಿತು ಸಿದ್ದರಾಮಯ್ಯ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮೂರುವರೆ ವರ್ಷ ಅಧಿಕಾರ ಪೂರೈಸಬೇಕೆ? ಬೇಡವೇ? ಎಂಬುವುದನ್ನು ತೀರ್ಮಾನಿಸುವುದು ರಾಜ್ಯದ ಜನತೆ. ಹೆಚ್.ಡಿ. ಕುಮಾರಸ್ವಾಮಿ ಅವರಲ್ಲ. ಲೋಕಸಭಾ ಚುನಾವಣೆಯಲ್ಲಿ ಏನಾಯಿತು ಎಂಬುವುದು ಜನರಿಗೆ ಗೊತ್ತಿದೆ. ಪ್ರತಿಪಕ್ಷಗಳು ಬಿಜೆಪಿ ಹೆಚ್ಚು ಸ್ಥಾನವನ್ನು ಗೆಲ್ಲುವುದಿಲ್ಲ ಎಂದು ಹೇಳಿದ್ದರು. ಆದರೆ ಬಿಜೆಪಿ 25 ಸ್ಥಾನವನ್ನು ಗೆದ್ದಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಕೇವಲ 1ಸ್ಥಾನವನ್ನು ಪಡೆಯಿತು. ಇಷ್ಟೆಲ್ಲಾ ಆದರೂ ಹೆಚ್.ಡಿ. ಕುಮಾರಸ್ವಾಮಿ ಅವರು ನಮ್ಮ ಪಕ್ಷದ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಮುಂದುವರೆಸಿದ್ದಾರೆ ಎಂದು ಕಿಡಿಕಾರಿದರು.