ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಸುಳಿವು ನೀಡಿದ ಅಶ್ವತ್ಥ್ ನಾರಾಯಣ.

59
firstsuddi

ಹುಬ್ಬಳ್ಳಿ : ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಕಾದು ನೋಡಿ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಸುಳಿವನ್ನು ಸಚಿವ ಅಶ್ವತ್ಥ್ ನಾರಾಯಣ ಅವರು ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಪರಿಸ್ಥಿತಿಗೆ ಅನುಗುಣವಾಗಿ ಯಾರ್ಯಾರು ಬರುತ್ತಾರೆ ಎನ್ನುವುದು ಗೊತ್ತಾಗುತ್ತದೆ. ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯವಿದೆ. ಅದೇ ರೀತಿ ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ಜನ ಬಿಜೆಪಿಗೆ ಸೇರಲಿದ್ದಾರೆ. ರಾಜ್ಯಸಭೆಯಲ್ಲಿ ಎ ಟೀಂ, ಬಿ ಟೀಂ ಅನ್ನೋ ಪ್ರಶ್ನೆಯೇ ಇಲ್ಲ. ನಮ್ಮ ಸಂಖ್ಯಾಬಲ ಹೆಚ್ಚಿದೆ ಹೀಗಾಗಿ ಸಹಜವಾಗಿ ಗೆಲುವಾಗಿದೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿನ ಹಿಂಸಾಚಾರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಒಂದು ಹೇಳಿಕೆಯನ್ನಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ನೂಪುರ್ ಶರ್ಮಾ ಹೇಳಿಕೆ ವಿಚಾರದಲ್ಲಿ ರಾಜಕೀಯ ಸರಿಯಲ್ಲ. ದೇಶದ ಐಕ್ಯತೆ ವಿಚಾರದಲ್ಲಿ ಹಿಂಸಾಚಾರ ನಡೆಸುವುದು ಸರಿಯಲ್ಲ ಎಂದರು.