ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್‍ಗೆ 6ನೇ ಬಲಿ…

140
firstsuddi

ಗದಗ : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಗದಗದಲ್ಲಿ ಕೊರೊನಾ ಸೋಂಕು 6ನೇ ಬಲಿ ಪಡೆದುಕೊಂಡಿದೆ. ಗದಗದ 80 ವರ್ಷದ ವೃದ್ಧೆ ಸೋಂಕಿಗೆ ಬಲಿಯಾಗಿದ್ದಾರೆ. ವೃದ್ಧೆಗೆ ಕೊರೊನಾ ಲಕ್ಷಣಗಳು ಕಂಡುಬಂದಿದ್ದರಿಂದ ಏಪ್ರಿಲ್ 4ರಂದು ಗದಗನ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಏಪ್ರಿಲ್ 7ರಂದು ವೃದ್ಧೆಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆದರೆ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ಸ್ಪಷ್ಠಪಡಿಸಿದ್ದಾರೆ. ವೃದ್ಧೆ ಸೋಂಕಿಗೆ ಸಾವನ್ನಪ್ಪುತ್ತಿದ್ದಂತೆ ಗದಗ ನಗರವನ್ನು ಸಂಪೂರ್ಣ ಲಾಕ್‍ಡೌನ್ ಮಾಡಲಾಗಿದೆ.