ಬೆಂಗಳೂರು : ಚುಮು ಚುಮು ಚಳಿ ಮಧ್ಯೆ ಮುಂದಿನ 5 ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ವರುಣದೇವ ಮತ್ತೆ ಕಾಡುವ ಸಾಧ್ಯತೆ ಇದೆ.
ವಾಯುಭಾರ ಕುಸಿತದಿಂದಾಗಿ ರಾಜ್ಯದ ಮೇಲೆ ಎಫೆಕ್ಟ್ ಬೀಳಲಿದೆ. ಇಂದು ಮತ್ತು ನಾಳೆ ಕರಾವಳಿಯ ಹಲವು ಕಡೆ, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ 13, 14, 15ರಂದು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಎರಡು, ಮೂರು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇತ್ತ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ನಾಳೆ ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.










