ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ…

68
firstsuddi

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಮಾ. 20, 21 ರಂದು ಕರಾವಳಿ ಭಾಗದಲ್ಲಿ, ಉತ್ತರ ಒಳನಾಡಿನ ಕೊಪ್ಪಳ,ರಾಯಚೂರು, ಕಲಬುರಗಿ, ಯಾದಗಿರಿಯಲ್ಲಿ 20, 21 ರಂದು ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ನಿನ್ನೆ ಕಾರವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗಿದೆ.