ರಾಜ್ಯದಲ್ಲಿ ಸದ್ಯಕ್ಕೆ ಕಠಿಣ ನಿಯಮ ಇಲ್ಲ : ಸಿಎಂ ಬೊಮ್ಮಾಯಿ.

55
firstsuddi

ಬೆಂಗಳೂರು : ಕೇಂದ್ರದಿಂದ ಯಾವುದೇ ನಿಯಮ ಜಾರಿಗೆ ಸೂಚನೆ ಬಾರದ ಹಿನ್ನಲೆ ಸದ್ಯಕ್ಕೆ ಕಠಿಣ ನಿಯಮ ಜಾರಿ ಮಾಡದೇ ಇರಲು ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಪ್ರಧಾನಿ ಮೋದಿ ತುರ್ತು ಸಭೆ ಬಳಿಕ ಮಾತನಾಡಿದ ಅವರು, ಆಸ್ಪತ್ರೆ ವ್ಯವಸ್ಥೆ ಬಗ್ಗೆ ಹೇಳಿದ್ದೇವೆ. ಸರ್ಕಾರಿ 50 ಸಾವಿರ ಬೆಡ್, ಖಾಸಗಿ 1 ಲಕ್ಷ ಬೆಡ್ ವ್ಯವಸ್ಥೆ ಮಾಡುತ್ತೇವೆ. ನಾವು ಸನ್ನದ್ಧರಾಗಿದೀವಿ ಅಂತ ಹೇಳಿದ್ದೇವೆ. ಪ್ರಧಾನ ಮಂತ್ರಿಗಳು ಸುದೀರ್ಘವಾಗಿ ರಾಜ್ಯದ ವರದಿ ಬಗ್ಗೆ ಪಡೆದಿದ್ದಾರೆ. ರಾಜ್ಯದ ಸ್ಥಿತಿಗತಿ ಬಗ್ಗೆಯೂ ನಾವು ಹೇಳಿದ್ದೇವೆ. ಸದ್ಯ ಕೋವಿಡ್ ನಿಯಂತ್ರಣದಲ್ಲಿದೆ. ಪ್ರತಿ ದಿನ 30 ಸಾವಿರ ಟೆಸ್ಟ್ ಹೆಚ್ಚಳ ಮಾಡಲು ಕ್ರಮ ವಹಿಸಿದ್ದೇವೆ ಎಂದರು.

ಏಪ್ರಿಲ್ 9ರ ಬಳಿಕ ಬೆಂಗಳೂರಿನಲ್ಲಿ ಕೋವಿಡ್ ಟೆಸ್ಟ್ ಹೆಚ್ಚಳ ಮಾಡುತ್ತೇವೆ. ಸಾರ್ವಜನಿಕವಾಗಿ ಸ್ಥಳಗಳಲ್ಲಿ ಕೊವೀಡ್ ನಿಯಮ ಪಾಲನೆಗೆ ಕ್ರಮ ಕೈಗೊಳ್ಳುತ್ತೇವೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ. ಅವರ ಟೆಲಿ ಟ್ರಾಕಿಂಗ್ ಕೂಡ ಮಾಡಲಾಗುತ್ತಿದೆ. ಪ್ರಧಾನಿ ಸೂಚನೆಯಂತೆ ಲಸಿಕೆ ಅಭಿಯಾನ ಚುರುಕು ಮಾಡುತ್ತೇವೆ. ಹಾಗೆಯೇ ಮಕ್ಕಳ ಲಸಿಕೆ ಅಭಿಯಾನಕ್ಕೆ ವೇಗ ಕೊಡಲು ನಿರ್ಧಾರ ಮಾಡಿದ್ದೇವೆ. 6 ರಿಂದ 12 ಮತ್ತು 15 ರಿಂದ 18 ಮತ್ತು 60 ವರ್ಷ ಮೇಲ್ಪಟ್ಟವರಿಗೂ ಲಸಿಕೆ ವೇಗ ಹೆಚ್ಚಳ ಮಾಡುತ್ತೇವೆ ಎಂದು ಹೇಳಿದರು.