ರಾಜ್ಯವು ದೇಶದ ಯಂತ್ರೋಪಕರಣಗಳ ರಾಜಧಾನಿ: ಕೇಂದ್ರ ಸಚಿವ ಹೆಚ್‍ಡಿಕೆ.

28

ಬೆಂಗಳೂರು: ಯಂತ್ರೋಪಕರಣ ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದೆ. ಭಾರತದ ಯಂತ್ರೋಪಕರಣಗಳಲ್ಲಿ ಕರ್ನಾಟಕ ಶೇಕಡ 50ರಷ್ಟು ಉತ್ಪಾದನೆ ಪಾಲನ್ನು ಹೊಂದಿದೆ. ಆದ್ದರಿಂದ ಕರ್ನಾಟಕ ದೇಶದ ಯಂತ್ರೋಪಕರಣಗಳ ರಾಜಧಾನಿ ಎಂದು ಪ್ರಖ್ಯಾತಿ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆದ ಭಾರತೀಯ ಯಂತ್ರೋಪಕರಣ ತಂತ್ರಜ್ಞಾನ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ಯಂತ್ರೋಪಕರಣ ಕ್ಷೇತ್ರಕ್ಕೆ ರಾಜ್ಯವು 5 ದಶಕಗಳ ಹಿಂದೆಯೇ ಬಲಿಷ್ಠವಾದ ಅಡಿಪಾಯ ಹಾಕಿದೆ. ಹಿಂದೂಸ್ತಾನ್ ಮಷಿನ್ ಅಂಡ್ ಟೂಲ್ಸ್ ಈ ಕ್ಷೇತ್ರಕ್ಕೆ ಮಹೋನ್ನತ ಕೊಡುಗೆ ನೀಡಿ, ಉತ್ಪಾದನಾ ಕ್ಷೇತ್ರದಲ್ಲಿ ಅನೇಕ ಮೈಲುಗಲ್ಲುಗಳನ್ನು ಸ್ಥಾಪಿಸಿತ್ತು. ಆಗಿನಿಂದಲೇ ಕರ್ನಾಟಕವು ನಾವೀನ್ಯತೆ ಮತ್ತು ಉತ್ಪಾದನಾ ಉತ್ಕೃಷ್ಟತೆಯನ್ನು ಪ್ರೋತ್ಸಾಹಿಸುವುದನ್ನು ಮುಂದುವರೆಸಿದೆ. ಯಂತ್ರೋಪಕರಣ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಲ್ಲ ಆಯಾಮಗಳಲ್ಲಿಯೂ ಉತ್ತೇಜನ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.