ರಾಜ್ಯಾದ್ಯಂತ 40ಕ್ಕೂ ಹೆಚ್ಚು ಎಸ್‌ಡಿಪಿಐ, ಪಿಎಫ್ಐ ಕಾರ್ಯಕರ್ತರು ಪೊಲೀಸ್ ವಶಕ್ಕೆ…

56
firstsuddi

ಬೆಂಗಳೂರು: ಇತ್ತೀಚೆಗೆ ಎನ್ ಐಎ ದೇಶದ ಎಲ್ಲಾ ಕಡೆಗಳಲ್ಲಿ ದಾಳಿ ನಡೆಸಿ ಪ್ರಮುಖ ಮುಖಂಡರನ್ನು ವಶಕ್ಕೆ ಪಡೆದುಕೊಂಡಿತ್ತು. ಈಗ ರಾಜ್ಯಾದ್ಯಂತ ಕರ್ನಾಟಕ ಪೊಲೀಸರು ಪಿಎಫ್ ಐ ಮತ್ತು ಎಸ್ ಡಿಪಿಐಗೆ ಶಾಕ್ ನೀಡಿದ್ದು, ಬೆಳ್ಳಂಬೆಳಗ್ಗೆಯೇ ದಾಳಿಗಿಳಿದ ಪೊಲೀಸರು ಪಿಎಫ್ ಐ ಮತ್ತು ಎಸ್ ಡಿಪಿಐ ಸಂಘಟನೆಗೆ ಸೇರಿದ ಸುಮಾರು 40 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ರಾಮನಗರ, ಮಂಗಳೂರು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಕೋಲಾರ, ಮೈಸೂರು, ಚಾಮರಾಜ ನಗರದಲ್ಲಿ ದಾಳಿ ನಡೆದಿದೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಹಣಕಾಸಿನ ನೆರವನ್ನು ಪಡೆದ ಅನುಮಾನದ ಮೇಲೆ ಈ ಮಹತ್ವದ ಕಾರ್ಯಾಚರಣೆ ನಡೆದಿದೆ ಎನ್ನಲಾಗುತ್ತಿದೆ. ಜಿಲ್ಲೆಗಳಲ್ಲಿ ಜೆಲ್ಲೆಗಳ ಎಸ್ಪಿ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ.

ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಮತ್ತು ಆಯಾ ಜಿಲ್ಲೆಗಳ ಎಸ್ಪಿ ಹಾಗೂ ಕಮಿಷನರ್ ಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ವಶಕ್ಕೆ ಪಡೆದವರು ಪಿಎಫ್ಐ ಪ್ರತಿಭಟನೆ ಹಾಗೂ ಪಿಎಫ್ಐಗೆ ಸೇರಿದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದರು. ಇದರ ಜೊತೆ ಇವರು ಭಾರೀ ಫಂಡಿಂಗ್ ಮಾಡುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.