ರಾಮ ಮಂದಿರ ಭೂಮಿ ಪೂಜೆಯಲ್ಲಿ ಭಾಗಿಯಾಗಿದ್ದ ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ಕೊರೊನಾ ಪಾಸಿಟಿವ್…

153
firstsuddi

ನವದೆಹಲಿ : ಅಯೋಧ್ಯೆ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮುಖ್ಯಸ್ಥ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಡವಾಗಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಗೆ ಆತಂಕ ಶುರುವಾಗಿದೆ. ಮಹಾಂತ್ ನೃತ್ಯ ಗೋಪಲದಾಸ್ ಅವರು ಆಗಸ್ಟ್ 5ರಂದು ನಡೆದ ರಾಮ ಮಂದಿರ ಭೂಮಿ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿ ಬೆನ್ ಪಾಟೇಲ್, ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಇದೀಗ ಮಹಂತ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಅವರ ಸಂಪರ್ಕದಲ್ಲಿದ್ದವರಿಗೂ ಆತಂಕ ಶುರುವಾಗಿದೆ. ಮಹಂತ್ ನೃತ್ಯ ಗೋಪಾಲದಾಸ್ ಅವರಿಗೆ ಸೋಂಕು ತಗುಲಿರುವುದು ದೃಢವಾಗುತ್ತಿದ್ದಂತೆ ಈ ಕುರಿತು ಮಾಹಿತಿ ಪಡೆದುಕೊಂಡ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಾಂತ್ ಅವರಿಗೆ ಶೀಘ್ರವಾಗಿ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ.