ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಳ್ಳಾರಿಗೆ ಶಂಕಿತ ಆರೋಪಿ ತೆರಳಿರುವ ಶಂಕೆ…

43
firstsuddi

ಬೆಂಗಳೂರು/ಬಳ್ಳಾರಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯಲ್ಲಿ ಶಂಕಿತ ಆರೋಪಿಯ ಚಲನವಲನದ ಬಗ್ಗೆ ಮಾಹಿತಿ ದೊರಕಿದ್ದು, ಎನ್ಐಎ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರಿನ ಸುಜಾತ ಸರ್ಕಲ್‌ನಲ್ಲಿ ಬಾಂಬರ್ ಬಸ್ ಹತ್ತಿ ತುಮಕೂರಿನಲ್ಲಿ ಇಳಿದಿದ್ದಾನೆ. ತುಮಕೂರಿನಿಂದ ಬಳ್ಳಾರಿಗೆ ಬಸ್‌ನಲ್ಲಿ ಬಂದು ನಂತರ ಮಂತ್ರಾಲಯ- ಗೋಕರ್ಣ ಬಸ್ ಹತ್ತಿ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಳ್ಳಾರಿ ಮತ್ತು ತುಮಕೂರು ಬಸ್ ನಿಲ್ದಾಣಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದೆ. ನಿನ್ನೆ ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಸ್ ನಿಲ್ದಾಣದಲ್ಲಿ ಶೋಧ ನಡೆಸಲಾಗುತ್ತಿದೆ. ಬಳ್ಳಾರಿ ಮತ್ತು ತುಮಕೂರು ಪೊಲೀಸರು ಎನ್ಐಎ ತಂಡಕ್ಕೆ ಸಾಥ್ ನೀಡಿದ್ದಾರೆ. ಬೆಂಗಳೂರಿಂದ ಎರಡು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.