ರಾಯಚೂರು : 5 ವರ್ಷದ ಬಾಲಕಿಗೆ ಶಂಕಿತ ಝಿಕಾ ವೈರಸ್ ಪತ್ತೆ…

57
firstsuddi

ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ಕೋಳಿ ಕ್ಯಾಂಪ್ ನಲ್ಲಿ 5 ವರ್ಷದ ಬಾಲಕಿಯಲ್ಲಿ ಶಂಕಿತ ಝಿಕಾ ವೈರಸ್ ಪತ್ತೆಯಾಗಿದೆ. ಕೋಳಿ ಕ್ಯಾಂಪ್ ನಿವಾಸಿ ನಾಗರಾಜ ಎಂಬುವರ ಪುತ್ರಿಗೆ ಝಿಕಾ ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆಯಿಂದ ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ.

ಕೆಲ ದಿನಗಳ ಹಿಂದೆ ಅನಾರೋಗ್ಯ ಪೀಡಿತ ಬಾಲಕಿಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಈ ವೇಳೆ ಬಾಲಕಿಗೆ ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಲಾಗಿದ್ದು, ಡೆಂಗ್ಯೂ ಮಾದರಿಯ ಶಂಕಿತ ಝಿಕಾ ವೈರಸ್ ಪತ್ತೆಯಾಗಿದೆ. ಸದ್ಯ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಗುಣಮುಖವಾಗುತ್ತಿದ್ದಾಳೆ.

ಶಂಕಿತ ಝಿಕಾ ವೈರಸ್ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಕೇಂದ್ರ ತಂಡ, ತಾಲೂಕು ವೈದ್ಯಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮುಂಜಾಗ್ರತ ಕ್ರಮವಾಗಿ ಮನೆಯವರ ಆರೋಗ್ಯ ಪರೀಕ್ಷೆಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಇನ್ನು ಕೋಳಿ ಕ್ಯಾಂಪ್ ನಲ್ಲಿ ಸೊಳ್ಳೆಗಳಿಂದ ಸಾಂಕ್ರಾಮಿಕ ರೋಗಗಳು ಹರಡುವ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಸಮೀಕ್ಷೆ ನಡೆಸುತ್ತಿದ್ದಾರೆ.