ರಾಯಚೂರು ಜಿಲ್ಲಾ ಚುನಾವಣಾ ಐಕಾನ್ ಆಗಿ ನಿರ್ದೇಶಕ ರಾಜಮೌಳಿ ನೇಮಕ…

69
firstsuddi

ರಾಯಚೂರು : ಖ್ಯಾತ ಚಲನಚಿತ್ರ ನಿರ್ದೇಶಕ ಎಸ್.ಎಸ್ ರಾಜಮೌಳಿಯವರನ್ನು ರಾಯಚೂರು ಜಿಲ್ಲೆಯ ಚುನಾವಣಾ ಐಕಾನ್ ಆಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ.

ರಾಜಮೌಳಿ ಅವರು ಮೂಲತಃ ರಾಯಚೂರಿನ ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್ ನವರು. ಚುನಾವಣೆ ಮತದಾನ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೇ ಇವರನ್ನು ಜನರು ಸುಲಭವಾಗಿ ಗುರುತಿಸುತ್ತಾರೆ. ನಿರ್ದೇಶಕ ಎಸ್.ಎಸ್. ರಾಜಮೌಳಿ ಕೂಡ ಸಮ್ಮತಿಸಿ ಒಪ್ಪಿಕೊಂಡಿದ್ದಾರೆ.

ಐಕಾನ್ ಆಗಿ ಆಯ್ಕೆ ಮಾಡಿರುವವರ ಮುಖ್ಯ ಕಾರ್ಯ ಮತದಾನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಅದರ ಬಗ್ಗೆ ಜನರಿಗೆ ವಿಡಿಯೋ ಮುಖಾಂತರ ಸಂದೇಶ ರವಾನಿಸಿವುದು ಆಗಿರುತ್ತದೆ. ಇದರಲ್ಲಿ ಯಾವುದೇ ಪಕ್ಷಗಳಿಗೆ ಬೆಂಬಲಿಸುವಂತಹ ಸಂದೇಶ ಇರುವುದಿಲ್ಲ. ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ಕ್ರೀನ್ ರೈಟರ್ ಹಾಗೂ ಚಿತ್ರ ಸಂಭಾಷಣೆಗಾರರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.