ರಾಯಚೂರು : ಶಂಕಿತ ಡೆಂಘೀ ಜ್ವರಕ್ಕೆ ಯುವಕ ಬಲಿಯಾಗಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಜೈಭೀಮ ನಗರದ ಯುವಕ ನವೀನ್ ಕುಮಾರ್ (18) ಮೃತ ಯುವಕ. ಜ್ವರ ಕಾಣಿಸಿಕೊಂಡ ಆರಂಭದಲ್ಲಿ ಮಾನ್ವಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಸರಿಯಾದ ಚಿಕಿತ್ಸೆ ಸಿಗದೇ ಜ್ವರ ಕಡಿಮೆಯಾಗಿಲ್ಲ. ಆಗ ಹೆಚ್ಚಿನ ಚಿಕಿತ್ಸೆಗೆ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಲ್ಲೂ ಕೂಡ ಸರಿಯಾದ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾನೆ ಎಂದು ಪೋಷಕರು ದೂರಿದ್ದಾರೆ.
ಡ್ಯಾನ್ಸರ್ ಆಗಬೇಕೆಂದು ಕನಸು ಕಂಡಿದ್ದ ಪಿಯು ವಿದ್ಯಾರ್ಥಿ ನವೀನ್ ಓದಿನಲ್ಲೂ ಚುರುಕಿದ್ದ. ಆದ್ರೆ, ಇದೀಗ ಡೆಂಘೀಗೆ ಬಲಿಯಾಗಿದ್ದು, ಕುಟುಂಬಸ್ಥರನ್ನು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಇನ್ನೂ ಈ ಹಿಂದೆ ಮಾನ್ವಿ ಪಟ್ಟಣದಲ್ಲಿ ಇಬ್ಬರು ಮಕ್ಕಳು ಶಂಕಿತ ಡೆಂಘೀ ಜ್ವರಕ್ಕೆ ಬಲಿಯಾಗಿದ್ದರು.










