ರಾಯಚೂರು : ಯುವಕನ ಮೇಲೆ ಅತ್ಯಾಚಾರ ಎಸಗಿದ ಕಾಮುಕನ ಬಂಧನ…

155
Firstsuddi

ರಾಯಚೂರು : ಜಿಲ್ಲೆಯ ಮಸ್ಕಿ ತಾಲ್ಲೂಕಿನ ಯದ್ದಲದಿನ್ನಿ ಗ್ರಾಮದಲ್ಲಿ ಯುವಕನ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೂಗುರೆಡ್ಡಿ ಬಂಧತ ಆರೋಪಿ. ಗ್ರಾಮದ ಸರ್ಕಾರಿ ಶಾಲೆಯೊಂದರ ಶೌಚಾಲಯದಲ್ಲಿ ಯುವಕನ ಮೇಲೆ ಅತ್ಯಾಚಾರ ಮಾಡಿದ್ದು, ಜೊತೆಗೆ ಈ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿತ್ತು. ಇದೀಗ ಈ ವಿಡಿಯೋ ವೈರಲ್ ಸಹ ಆಗಿದೆ.

ಬಲವಂತವಾಗಿ ಲೈಂಗಿಕ ಕ್ರಿಯೆ ಎಸಗಿರುವ ಆರೋಪಿ ಸೂಗುರೆಡ್ಡಿ ಹಾಗೂ ಸಂತ್ರಸ್ತ ಯುವಕ ಸಂಬಂಧಿಗಳಾಗಿದ್ದಾರೆ ಎನ್ನಲಾಗಿದ್ದು, ಸಂತ್ರಸ್ತ ಯುವಕನ ತಂದೆ ಸಿರವಾರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಆ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.