ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲು…

60
firstsuddi

ಬೆಂಗಳೂರು : ಚುನಾವಣಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಏಪ್ರಿಲ್ 23 ರಂದು ಬೆಂಗಳೂರಿನ ಹೋಟೆಲ್ ನಲ್ಲಿ ಶ್ರೀನಿವಾಸ್ ಅವರು ನಡೆಸುತ್ತಿದ್ದ ಸಭೆಯ ಸಮಯದಲ್ಲಿ ಚುನಾವಣಾಧಿಕಾರಿಗಳು ಶೋಧ ಮತ್ತು ತಪಾಸಣೆ ನಡೆಸುತ್ತಿದ್ದಾಗ ಅಡ್ಡಿಪಡಿಸಿದ್ದಾರೆ. ಅಲ್ಲದೇ ದಾಳಿ ವೇಳೆ ಸಹಕರಿಸದೇ ಎಸ್ ಟಿಎಫ್ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.