ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಯುತ್ತದೆ : ಡಾ|| ನಾಗರಾಜ್.

112
firstsuddi

ಚಿಕ್ಕಮಗಳೂರು : ನಗರದ ಸಂತ ಜೋಸೇಫರ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ತಾಲ್ಲೂಕಿನ ಆಣೂರಿನಲ್ಲಿ ನಿನ್ನೆ ಆರಂಭಗೊಂಡಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎಂ.ಮಹಾಲಕ್ಷ್ಮೀ ಶಿಬಿರಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಕುವೆಂಪು ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ|| ನಾಗರಾಜ್ ಪರಿಸರ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವಾ ಮನೋಭಾವ ಬೆಳೆಯುತ್ತದೆ ಎಂದು ಹೇಳಿದರು.

ಮಕ್ಕಳು ವಿದ್ಯಾರ್ಥಿ ದೆಸೆಯಲ್ಲಿ ಪಠ್ಯದೊಂದಿಗೆ ಶಿಸ್ತು, ಸಂಸ್ಕøತಿ, ಸಂಸ್ಕಾರ ಮತ್ತು ಸೇವಾ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಕಾರ್ಡೋಜ 7 ದಿನಗಳ ಕಾಲ ನಡೆಯಲಿರುವ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮದ ಸ್ವಚ್ಚತೆ, ಗ್ರಾಮೀಣರ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ನಡೆಸಲಾಗುವುದು ಎಂದು ತಿಳಿಸಿದರು. ಪ್ರತಿದಿನ ಗ್ರಾಮದಲ್ಲಿ ವಿದ್ಯಾರ್ಥಿಗಳಿಂದ ಶ್ರಮದಾನ ಸಂಜೆ ಸಾಂಸ್ಕøತಿಕ ಕಾರ್ಯಕ್ರಮ ನಡೆಯುತ್ತದೆ ಎಂದು ಹೇಳಿದರು.

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಎಂ.ಎ.ವಿನಯ್ ಕುಮಾರ್, ಸಂತ ಜೋಸೇಫರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಫಾದರ್ ವಿಜಯ್‍ಕುಮಾರ್, ಕಾಫಿ ಬೆಳೆಗಾರ ದಿನೇಶ್ ಆಗಳ, ಗ್ರಾ.ಪಂ. ಉಪಾಧ್ಯಕ್ಷ ಬಿ.ಯು.ಈರಯ್ಯ, ಸದಸ್ಯರಾದ ಕೆ.ಬಿ.ಚೇತನ್, ಎ.ಸುನೀತ, ಹೆಚ್.ಕೆ.ಗಿರಿಜಾ ಲಕ್ಷ್ಮಣ್, ಛಾಯಾ, ಹೆಚ್.ಹೆಚ್.ದಿನೇಶ್‍ಕುಮಾರ್, ಕೆ.ಆರ್.ದೊಡ್ಡಯ್ಯ, ಲೀಲಾವತಿ, ಹೆಚ್.ಆರ್.ಲೋಕೇಶ್ ಉಪಸ್ಥಿತರಿದ್ದರು.