ರೆಮ್ ಡಿಸಿವಿರ್ ಇಂಜೆಕ್ಷನ್ ಮಾರಾಟ ; ಇಬ್ಬರ ಬಂಧನ…

117
firstsuddi

ಬೆಂಗಳೂರು : ರೆಮ್ ಡಿಸಿವಿರ್ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸಂತೋಷ್ ಹಾಗೂ ಸುನೀಲ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬಸವೇಶ್ವರ ನಗರದಲ್ಲಿ ಹೆಚ್ಚಿನ ಬೆಲೆಗೆ ಅಕ್ರಮವಾಗಿ ರೆಮ್ ಡಿಸಿವಿರ್ ಔಷಧ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 8 ರೆಮ್ ಡಿಸಿವಿರ್ ಇಂಜೆಕ್ಷನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂತೋಷ್ ಖಾಸಗಿ ಆಸ್ಪತ್ರೆ ಸಿಬ್ಬಂದಿಯಾಗಿದ್ರೆ, ಸುನೀಲ್ ಆಂಬ್ಯುಲೆನ್ಸ್ ಡ್ರೈವರ್ ಆಗಿದ್ದಾನೆ.

ಘಟನೆ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.