ಕಲಬುರಗಿ : ರೈತನಿಗೆ ಪರಿಹಾರ ನೀಡುವಲ್ಲಿ ವಿಳಂಬವಾದ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರ ಸರ್ಕಾರಿ ಕಾರು ಜಪ್ತಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಲಯ ಆದೇಶಿಸಿದೆ.
2008ರಲ್ಲಿ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ರೈತ ಕಲ್ಲಪ್ಪ ಮೇತ್ರೆಯವರ 33 ಗುಂಟೆ ಜಮೀನು ಭೀಮಾ ಏತ ನಿರಾವರಿ ಯೋಜನೆಯಲ್ಲಿ ಮುಳುಗಡೆಯಾಗಿತ್ತು. ಮುಳುಗಡೆಯಾದ ಜಮೀನಿಗೆ 7,39,632 ಪರಿಹಾರ ನೀಡವಂತೆ ಕೋರ್ಟ್ ಆದೇಶ ಮಾಡಿತ್ತು.
ಆದರೆ ಕೋರ್ಟ್ ಆದೇಶ ಮಾಡಿದ್ರೂ ಪರಿಹಾರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಕಾರು ಜಪ್ತಿಗೆ ಕೋರ್ಟ್ ಆದೇಶ ಮಾಡಿದೆ. ಕೋರ್ಟ್ ಆದೇಶದ ಹಿನ್ನೆಲೆ ಕಾರು ಜಪ್ತಿಗೆ ಕೋರ್ಟ್ ಸಿಬ್ಬಂದಿ ಮತ್ತು ವಕೀಲರು ಆಗಮಿಸಿದ್ದಾರೆ. ಕೂಡಲೇ ಎಚ್ಚೆತ್ತ ಭೂಸ್ವಾಧೀನ ಇಲಾಖೆ ಅಧಿಕಾರಿಗಳು ವಕೀಲರೊಂದಿಗೆ ಮತ್ತು ಕಲ್ಲಪ್ಪ ಜೊತೆ ಸಂಧಾನ ನಡೆಸಿ ಚೆಕ್ ಕೋರ್ಟ್ ನೀಡುವುದಾಗಿ ಹೇಳಿದ್ದಾರೆ.










