ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ – ಮೂರು ಕೃಷಿ ಕಾಯ್ದೆ ವಾಪಸ್…

79
firstsuddi

ನವದೆಹಲಿ : ಕಳೆದ ಒಂದು ವರ್ಷದಿಂದ ನಡೆಸುತ್ತಿದ್ದ ರೈತರ ಹೋರಾಟಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಮೂರು ಕೃಷಿ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.

ಇಂದು ಗುರುನಾನಕ್ ದಿನಾಚರಣೆ ಹಿನ್ನಲೆ ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ರೈತರ ನಿರಂತರ ಹೋರಾಟ ಹಿನ್ನೆಲೆ ಮೂರು ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುತ್ತಿದ್ದೇವೆ. ಹೋರಾಟ ಮಾಡುತ್ತಿರುವ ಎಲ್ಲ ರೈತರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗಿ ಹೊಸ ಜೀವನ ಆರಂಭಿಸಲು ಒತ್ತಾಯಿಸುತ್ತೇನೆ ಎಂದು ಇದೇ ವೇಳೆ ರೈತರಲ್ಲಿ ಪ್ರಧಾನಿ ಮನವಿ ಮಾಡಿಕೊಂಡರು.

ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು 3 ಕಾಯ್ದೆ ಜಾರಿಗೆ ತಂದಿದ್ದೆವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿಯಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಮೂರು ಕೃಷಿಕಾಯ್ದೆ:
1. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ. 
2. ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಖಾತ್ರಿ ಮತ್ತು ಕೃಷಿ ಸೇವೆಗಳ ಒಪ್ಪಂದ ಮಸೂದೆ. 
3. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ.