ರೈತರಿಗೆ ಪ್ರತಿ ವರ್ಷ 15 ಸಾವಿರ – ಪ್ರಣಾಳಿಕೆ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ.

42
firstsuddi

ರಾಯಚೂರು : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ನಿನ್ನೆ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಜನಾರ್ದನ ರೆಡ್ಡಿ ನಿನ್ನೆ ಸಿಂಧನೂರು ಕ್ಷೇತ್ರದಲ್ಲಿ ಪತ್ನಿ ಅರುಣಾಲಕ್ಷ್ಮೀ ಜೊತೆ ಪಾದಯಾತ್ರೆ ನಡೆಸಿದರು. ಸುಮಾರು 15 ಕಿಲೋ ಮೀಟರ್ ಹೆಜ್ಜೆ ಹಾಕಿದ ಜನಾರ್ದನ ರೆಡ್ಡಿ, ಬಳಿಕ ರೈತ ದಂಪತಿಗಳ ಪಾದಪೂಜೆ ಮಾಡಿ ಗಮನಸೆಳೆದರು. ಅಲ್ಲದೇ ಸುಕ್ಷೇತ್ರ ಅಂಬಾಮಠದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಕೆಆರ್ ಪಿಪಿ ಅಧಿಕಾರಕ್ಕೆ ಬಂದರೇ ರೈತರಿಗೆ ಮೊದಲ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.

ಪ್ರಣಾಳಿಕೆಯಲ್ಲಿ ಏನಿದೆ?
ಪ್ರತಿ ವರ್ಷ ಪ್ರತಿ ರೈತನ ಅಕೌಂಟ್ ಗೆ 15 ಸಾವಿರ ಹಣ ಜಮಾ ಮಾಡಲಾಗುವುದು. ರೈತರ ಮನೆ ಬಾಗಿಲಿಗೆ ಅಧಿಕಾರಿಗಳು ಹೋಗಿ ಸಮಸ್ಯೆ ಆಲಿಸಲು ಕ್ರಮ ಕೈಗೊಳ್ಳಲಾಗುವುದು. ಎಲ್ಲ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು, ನೀರಾವರಿ ಯೋಜನೆ ಸದೃಢಗೊಳಿಸಲಾಗುತ್ತದೆ. ಸಕಾಲಕ್ಕೆ ರಸ ಗೊಬ್ಬರಗಳನ್ನು ರೈತರಿಗೆ ನೀಡಲು ಕ್ರಮ ತೆಗೆದುಕೊಳ್ಳುವ ಬಗ್ಗೆ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.