ರೈತರಿಗೆ ವಾರ್ಷಿಕ 10,000 ರೂ ನೆರವು: ಮೋದಿ ಕೊಟ್ಟ ಭರವಸೆ ಇಲ್ಲಿದೆ.

64

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ದಶಕ ನಂತರ ಬುಧವಾರ ಮೊದಲ ಹಂತದ ಚುನಾವಣೆಗೆ ಮತದಾನ ನಡೆದಿದೆ. ಎರಡನೇ ಹಂತದಲ್ಲಿ, ಸೆಪ್ಟೆಂಬರ್ 25 ರಂದು ಜಮ್ಮು ಮತ್ತು ಕಾಶ್ಮೀರದ 26 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮೂರನೇ ಮತ್ತು ಕೊನೆಯ ಹಂತದಲ್ಲಿ ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರದ 40 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ.
ಈಗಾಗಲೇ ಭರ್ಜರಿ ಚುನಾವಣಾ ಪ್ರಚಾರವನ್ನ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಶ್ರೀನಗರದ ಶೇರ್-ಎ-ಕಾಶ್ಮೀರ್ ಸ್ಟೇಡಿಯಮ್‍ನಲ್ಲಿ ಬಿಜೆಪಿ ಅಭ್ಯರ್ಥಿಗಳ ಬೆಂಬಲಾರ್ಥ ರ್ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ಭರವಸೆಯನ್ನು ಬಿಜೆಪಿ ಈಡೇರಿಸಲಿದೆ ಎಂದರು.
ಇನ್ನೂ ರೈತರಿಗೆ ವಾರ್ಷಿಕ 10,000 ರೂ.ಗಳ ನೆರವು, ಪ್ರತಿ ಕುಟುಂಬದ ಯಜಮಾನಿಗೆ 18,000 ರೂ.ಗಳ ವಾರ್ಷಿಕ ನೆರವು, ಆರೋಗ್ಯ ವಿಮೆ ರಕ್ಷಣೆಯನ್ನು ಈಗಿನ ಐದು ಲಕ್ಷ ರೂ.ಗಳಿಂದ ಏಳು ಲಕ್ಷ ರೂ.ಗಳಿಗೆ ಹೆಚ್ಚಿಸುವುದು ಇವು ಪ್ರಧಾನಿಯವರ ಇತರ ಭರವಸೆಗಳಲ್ಲಿ ಸೇರಿವೆ. ಕಳೆದ ಐದು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯಲ್ಲಿ ವ್ಯಾಪಕ ಬದಲಾವಣೆಗಳಾಗಿವೆ ಎಂದ ಪ್ರಧಾನಿ ಮೋದಿ ಅವರು, ಹಿಂದೆ ಚುನಾವಣಾ ಪ್ರಚಾರಗಳು ಸಂಜೆ ಆರು ಗಂಟೆಗೆ ಅಂತ್ಯಗೊಳ್ಳುತ್ತಿದ್ದವು,ಮನೆಮನೆಗೆ ತೆರಳಿ ಪ್ರಚಾರ ಅಸಾಧ್ಯವಾಗಿತ್ತು, ಇಂದು ತಡರಾತ್ರಿಯಲ್ಲಿಯೂ ಚುನಾವಣಾ ಪ್ರಚಾರ ನಡೆಯುತ್ತಿದೆ. ಈಗ ಜನರು ಪ್ರಜಾಪ್ರಭುತ್ವವನ್ನು ಸಂಭ್ರಮಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.