ರೈಲಿಗೆ ಸಿಲುಕಿ ವಿದ್ಯಾರ್ಥಿ ಧಾರುಣ ಸಾವು-ಆತ್ಮಹತ್ಯೆ ಶಂಕೆ…

507
firstsuddi

ತುಮಕೂರು : ರೈಲಿಗೆ ಸಿಲುಕಿ ವಿದ್ಯಾರ್ಥಿ ಧಾರುಣವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿಪಟೂರು ನಗರದ ಶಿವಕುಮಾರ್ ಸ್ವಾಮೀಜಿ ವೃತ್ತದ ಬಳಿ ನಡೆದಿದೆ. ಬೆಂಗಳೂರು ಮೂಲದ ಆರ್. ಮಧು ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಮೃತ ವಿದ್ಯಾರ್ಥಿ ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ನಿನ್ನೆ ಸಂಜೆ ಜೈಪುರ್ ಎಕ್ಸ್ ಪ್ರೆಸ್ ರೈಲು ಹೋಗುತ್ತಿದ್ದ ವೇಳೆ ಮಧು ರೈಲಿಗೆ ಅಡ್ಡ ಬಂದು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಪ್ರತ್ಯಕ್ಷದರ್ಶಿಗಳು ಇದು ಅಪಘಾತವಲ್ಲ, ಆತ್ಮಹತ್ಯೆ ಎಂದು ಅಭಿಪ್ರಾಯಪಟ್ಟಿದ್ದು, ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಅರಸೀಕೆರೆ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.