ರೈಲ್ವೆ ಹಳಿ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ರೈಲು ಹರಿದು 16 ಮಂದಿ ಸಾವು…

227
firstsuddi

ಮಹಾರಾಷ್ಟ್ರ : ಹಳಿ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲು ರೈಲು ಹರಿದು 16 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ನಡೆದಿದೆ. ಮೃತರೆಲ್ಲರು ಔರಂಗಾಬಾದ್‍ನಿಂದ ಮಧ್ಯಪ್ರದೇಶಕ್ಕೆ ನಡೆದುಕೊಂಡು ತೆರಳುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಆಯಾಸವಾಗಿದ್ದರಿಂದ ರೈಲ್ವೆ ಹಳಿ ಮೇಲೆ ಮಲಗಿದ್ದರು. ಇಂದು ಬೆಳಗ್ಗಿನ ಜಾವ 5ಗಂಟೆ ಸುಮಾರಿಗೆ ಬಂದ ಗೂಡ್ಸ್ ರೈಲು ಕಾರ್ಮಿಕರ ಮೇಲೆ ಹರಿದಿದ್ದು, ಪರಿಣಾಮ ಮಕ್ಕಳು, ಮಹಿಳೆಯರು ಸೇರಿದಂತೆ 16 ಮಂದಿ ಕಾರ್ಮಿಕರ ದೇಹ ಛಿದ್ರ ಛಿದ್ರವಾಗಿದ್ದು, 5 ಮಂದಿ ಕಾರ್ಮಿಕರು ಗಂಭೀರ ಗಾಯಗೊಂಡಿದ್ದು, ಘಟನಾ ಸ್ಥಳಕ್ಕೆ ಕರ್ಮದ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಮೀಪದ ಆಸ್ಪತ್ರೆಗೆ ರವಾನಿಸಿದ್ದು, ತನಿಖೆ ನಡೆಸುತ್ತಿದ್ದಾರೆ.