ರೋಹಿಣಿ, ರೂಪಾ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಿದ ಸರ್ಕಾರ…

55
firstsuddi

ಬೆಂಗಳೂರು : ಪರಸ್ಪರ ಆರೋಪ- ಪ್ರತ್ಯಾರೋಪ ಮಾಡಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಇಲಾಖಾ ವಿಚಾರಣೆಗೆ ಸರ್ಕಾರ ಆದೇಶಿಸಿದೆ.

ಸಿಎಂ ಬೊಮ್ಮಾಯಿ ಸೂಚನೆ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಲಾಖಾ ವಿಚಾರಣೆಗೆ ಆದೇಶ ಹೊರಡಿಸಿದ್ದಾರೆ. ರೋಹಿಣಿ ವಿರುದ್ಧ ಐಪಿಎಸ್ ಡಿ.ರೂಪಾ ಬಹಿರಂಗ ಹೇಳಿಕೆ. ಸಾಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ಫೋಟೋ ಪ್ರಕಟಣೆ. ಸರ್ಕಾರಕ್ಕೆ ಮುಜುಗರ ಉಂಟು ಮಾಡಿರುವುದು. ಐಎಎಸ್ ರೋಹಿಣಿ ಸಿಂಧೂರಿ ವಿರುದ್ಧ ಈಜುಕೊಳ ನಿರ್ಮಾಣ ಆರೋಪ. ರೋಹಿಣಿಯಿಂದ ಪಾರಂಪರಿಕ ಕಟ್ಟಡ ನಿಯಮಾವಳಿ ಉಲ್ಲಂಘನೆ ಹಾಗೂ ಬ್ಯಾಗ್ ಖರೀದಿ ಪ್ರಕರಣಗಳು ಇಲಾಖೆ ತನಿಖಾ ವ್ಯಾಪ್ತಿಗೆ ಒಳಪಡಲಿದೆ. ಇಬ್ಬರು ಅಧಿಕಾರಿಗಳ ವಿರುದ್ಧ ಸಿವಿಲ್ ಸೇವಾ ನಿಯಮಾವಳಿ ಉಲ್ಲಂಘನೆಯನ್ನೂ ತನಿಖೆಗೆ ಒಳಪಡಿಸಲಾಗುವುದು.

ರೋಹಿಣಿ ಸಿಂಧೂರಿ, ಡಿ ರೂಪಾ ಅವರು ಫೆಬ್ರವರಿ 20ರಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರನ್ನು ಭೇಟಿಯಾಗಿ ದಾಖಲೆಗಳೊಂದಿಗೆ ಪ್ರತಿದೂರು ನೀಡಿದ್ದರು. ಇದಾದ ಬಳಿಕ ರಾಜ್ಯ ಸರ್ಕಾರ ಸ್ಥಳ ನಿಗದಿಗೊಳಿಸದೇ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು.

ಅದಕ್ಕೂ ಮೊದಲು ಸಿಬ್ಬಂದಿ ಮತ್ತು ಆಡಳಿತ ಇಲಾಖೆಯಿಂದ ಅಧಿಕಾರಿಗಳಿಗೆ ನೋಟಿಸ್ ಜಾರಿಯಾಗಿತ್ತು. ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ನೋಟಿಸ್ ನೀಡಿದ್ದರು. ಸೇವಾ ನಿಯಮದ ಉಲ್ಲಂಘನೆ ಮಾಡದಂತೆ ಎಚ್ಚರಿಕೆ ನೀಡಲಾಗಿತ್ತು.