ರೋಹಿಣಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಡಿ.ರೂಪಾಗೆ ಕೋರ್ಟ್ ನಿರ್ಬಂಧ…

49
firstsuddi

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಇತರ ಎಲ್ಲಾ ಪ್ರತಿವಾದಿಗಳಿಗೆ ಸಿಟಿ ಸಿವಿಲ್ ಕೋರ್ಟ್ ನಿನ್ನೆ ನಿರ್ಬಂಧ ವಿಧಿಸಿದೆ. ಇದರೊಂದಿಗೆ ರೋಹಿಣಿ ಸಿಂಧೂರಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ತಮ್ಮ ವಿರುದ್ಧ ಹೇಳಿಕೆ ನೀಡದಂತೆ ಡಿ.ರೂಪ ಅವರಿಗೆ ಹಾಗೂ ಇತರ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ರೋಹಿಣಿ ಸಿಂಧೂರಿ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ರೂಪಾ ಸೇರಿದಂತೆ ತಮ್ಮ ವೈಯಕ್ತಿಕ ವಿಚಾರಗಳನ್ನು ಹಂಚಿಕೊಂಡಿದ್ದ ಮಾಧ್ಯಮಗಳು ಸೇರಿ 66 ಜನರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ರೂಪಾ ಹಾಗೂ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿ, ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.