ರ್ಯಾಂಪ್ ವಾಕ್ ಅಭ್ಯಾಸ ಮಾಡುತ್ತಿದ್ದ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು…

229
firstsuddi

ಬೆಂಗಳೂರು : ಕಾಲೇಜು ಫ್ರೆಶರ್ಸ್ ಡೇ ಕಾರ್ಯಕ್ರಮಕ್ಕೆ ರ್ಯಾಂಪ್ ವಾಕ್ ಅಭ್ಯಾಸ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ವೇದಿಕೆ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ನಡೆದಿದೆ. ಶಾಲಿನಿ(21) ಮೃತ ವಿದ್ಯಾರ್ಥಿನಿ ಎನ್ನಲಾಗಿದ್ದು, ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ಎಂಬಿಎ ಓದುತ್ತಿದ್ದ ಶಾಲಿನಿ ಕಾಲೇಜಿನಲ್ಲಿ ನಡೆಯಬೇಕಿದ್ದ ಫ್ರೆಶರ್ಸ್ ಡೇ ಕಾರ್ಯಕ್ರಮಕ್ಕಾಗಿ ರ್ಯಾಂಪ್ ವಾಕ್ ಅಭ್ಯಾಸ ಮಾಡುತ್ತಿದ್ದ ವೇಳೆ ವೇದಿಕೆ ಮೇಲೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಕೂಡಲೇ ಕಾಲೇಜು ಸಿಬ್ಬಂದಿಗಳು ಶಾಲಿನಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಾಲಿ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.