ರ‍್ಯಾಕ್ ನಲ್ಲಿಟ್ಟಿದ್ದ ಬೆಡ್ ಬಿದ್ದು 2 ವರ್ಷದ ಪುಟ್ಟ ಬಾಲಕ ಸಾವು…

102
firstsuddi

ತಿರುವನಂತಪುರಂ: ರ‍್ಯಾಕ್ ನಲ್ಲಿಟ್ಟಿದ್ದ ಬೆಡ್ ಬಿದ್ದು 2 ವರ್ಷದ ಪುಟ್ಟ ಬಾಲಕ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಕೇರಳದ ಕೋಯಿಕ್ಕೋಡ್‍ನಲ್ಲಿ ನಡೆದಿದೆ.

ಮೃತನನ್ನು ಜೆಫಿನ್ ಸಂದೀಪ್ (2) ಎಂದು ಗುರುತಿಸಲಾಗಿದೆ. ಈತ ಸಂದೀಪ್ ಹಾಗೂ ಜಿನ್ಸಿ ದಂಪತಿಯ ಪುತ್ರ.

ಬಾಲಕ ಮಲಗಿ ಗಾಢ ನಿದ್ದೆಯಲ್ಲಿದ್ದ ಸಂದರ್ಭದಲ್ಲಿ ರ‍್ಯಾಕ್ ನಲ್ಲಿಟ್ಟಿದ ಬೆಡ್ ಆತನ ಮೈಮೇಲೆ ಬಿದ್ದಿದೆ. ಇತ್ತ ಬೆಡ್ ಬಾಲಕನ ಮೇಲೆ ಬಿದ್ದ ವಿಚಾರ ತಿಳಿಯುತ್ತಿದ್ದಂತೆಯೇ ಆತನ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆತನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

ಘಟನೆ ನಡೆದ ಸಂದರ್ಭದಲ್ಲಿ ಜೆಫಿನ್ ಹಾಗೂ ಆತನ ತಾಯಿ ಇಬ್ಬರೇ ಮನೆಯೊಳಗಡೆ ಇದ್ದರು. ಜೆಫಿನ್ ತಂದೆ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಕೆಲಸವೊಂದರ ನಿಮಿತ್ತ ಅವರು ಹೊರಗಡೆ ಹೋಗಿದ್ದರು ಎಂಬುದಾಗಿ ತಿಳಿದು ಬಂದಿದೆ.