ಲಂಚಕ್ಕೆ ಬೇಡಿಕೆ – ಬೆಳಗಾವಿ ಮುಜರಾಯಿ ಇಲಾಖೆ ತಹಶೀಲ್ದಾರ್ ಬಂಧನ…

94
firstsuddi

ಬೆಳಗಾವಿ : ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಮುಜರಾಯಿ ಇಲಾಖೆ ತಹಶೀಲ್ದಾರ್ ನನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮುಜರಾಯಿ ತಹಶೀಲ್ದಾರ್ ದಶರಥ ನಕುಲ ಜಾಧವ ಬಂಧಿತ ಆರೋಪಿ. ರಾಮದುರ್ಗದಲ್ಲಿನ ಯಕಲಮ್ಮ ದೇವಸ್ಥಾನ ಜೀರ್ಣೋದ್ದಾರಕ್ಕಾಗಿ ಮುಜರಾಯಿ ಇಲಾಖೆಯ ಆರಾಧನಾ ಯೋಜನೆಯಡಿ 4 ಲಕ್ಷ ರೂ. ಮಂಜೂರಾಗಿತ್ತು. ಅನುದಾನ ಬಿಡುಗಡೆಗಾಗಿ ನಕುಲ ಜಾಧವ ರೂ.20 ಸಾವಿರ ಬೇಡಿಕೆ ಇಟ್ಟಿದ್ದರು.

ಲಂಚದ ವಿಚಾರಕ್ಕೆ ಸಂಬಂಧಪಟ್ಟಂತೆ ದೇವಸ್ಥಾನದ ಸುಭಾಷ ಗೋಡಕೆ ಎಂಬವವರು ಎಸಿಬಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ನಿನ್ನೆ ರಾತ್ರಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದಾರೆ. ಈ ಕುರಿತು ತನಿಖೆ ಮುಂದುವರೆಸಿದ್ದಾರೆ.