ಲಕ್ಷ್ಮಣ ಸವದಿ ಬಿಜೆಪಿ ತೊರೆದ ವಿಚಾರ ದುಃಖ ತರಿಸಿದೆ : ಬೊಮ್ಮಾಯಿ.

62
firstsuddi

ಬೆಂಗಳೂರು : ಲಕ್ಷ್ಮಣ ಸವದಿ ಬಿಜೆಪಿ ತೊರೆದ ವಿಚಾರ ತೀವ್ರ ದುಃಖ ತರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿ ಜೊತೆ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಸವದಿ ಪಕ್ಷ ತೊರೆದು ಹೋಗಬೇಕು ಎಂದು ನಿರ್ಧಾರ ಮಾಡಿದ್ದಾರೆ, ಹೋಗಲಿ. ಅವರಿಗೆ ಕಾಂಗ್ರೆಸ್ ನಲ್ಲಿ ರಾಜಕೀಯ ಭವಿಷ್ಯ ಕಾಣಿಸುತ್ತಿರಬಹುದು ಎಂದಿದ್ದಾರೆ.

ಕಾಂಗ್ರೆಸ್ ಗೆ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳು ಗತಿಯಿಲ್ಲ. ಅದಕ್ಕಾಗಿ ಬೇರೆ ಪಕ್ಷಗಳಿಂದ ಕೆಲವರನ್ನು ಸೇರಿಸಿಕೊಳ್ಳುತ್ತಿದ್ದಾರೆ. ಸಹಜವಾಗಿಯೇ ಆಡಳಿತ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿರುತ್ತಾರೆ. ಯಾರೇ ತೊರೆದರೂ ಕಾರ್ಯಕರ್ತರು ನಮ್ಮ ಜೊತೆಗೆ ಇದ್ದಾರೆ. ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದರು.