ಲಖಿಂಪುರ ಖೇರಿ ಹಿಂಸಾಚಾರ ಕೇಸ್ – ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರನಿಗೆ ಜಾಮೀನು…

83
firstsuddi

ಅಲಹಾಬಾದ್ : ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಅಜಯ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ನ ಲಖನೌ ಪೀಠ ಇಂದು ಜಾಮೀನು ನೀಡಿದೆ.

2021ರ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ, ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ಆಶಿಶ್‌ ಮಿಶ್ರಾ ಹಾಗೂ ಅವರ ಬೆಂಗಾವಲು ಪಡೆಯ ವಾಹನ ಹರಿದಿತ್ತು. ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದರು.

ಪ್ರಕರಣ ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅಕ್ಟೋಬರ್ 9ರಂದು ಆಶೀಶ್ ಮಿಶ್ರಾ ಬಂಧನವಾಗಿತ್ತು. ಇದೀಗ ನಾಲ್ಕು ತಿಂಗಳ ನಂತರ ಅವರಿಗೆ ಜಾಮೀನು ಸಿಕ್ಕಿದೆ.