ಲಖಿಂಪುರ ಖೇರಿ ಹಿಂಸಾಚಾರ – ವಿಚಾರಣೆಗೆ ಹಾಜರಾದ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ…

67
firstsuddi

ಲಕ್ನೋ(ಉತ್ತರ ಪ್ರದೇಶ): ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಇಂದು ಉತ್ತರ ಪ್ರದೇಶ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಅಕ್ಟೋಬರ್ 8(ನಿನ್ನೆ)ರಂದು ಆಶಿಶ್ ಮಿಶ್ರಾ ಕೋರ್ಟ್ ಗೆ  ಹಾಜರಾಗಲು ನೋಟಿಸ್ ನೀಡಲಾಗಿತ್ತು. ಆದರೆ ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಪೊಲೀಸರ ಮುಂದೆ ಹಾಜರಾಗಿದ್ದಾರೆ.

ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿಸಿದ ಪ್ರಕರಣದಲ್ಲಿ ಆಶೀಶ್ ಮಿಶ್ರಾ ವಿರುದ್ಧ ಆರೋಪ ಕೇಳಿಬಂದಿದೆ. ಅಲ್ಲದೆ, ಪೊಲೀಸರು ಈಗಾಗಲೇ ಕೊಲೆ ಕೇಸ್ ದಾಖಲಿಸಿದ್ದಾರೆ. ಆದರೆ ಇದುವರೆಗೂ ಅವರನ್ನು ಬಂಧಿಸಿಲ್ಲ ಎಂದು ನಿನ್ನೆ ಸುಪ್ರೀಂಕೋರ್ಟ್ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಅದಕ್ಕೆ ಉತ್ತರಿಸಿದ್ದ ಸರ್ಕಾರದ ಪರ ಹಿರಿಯ ವಕೀಲ ಹರೀಶ್ ಸಾಲ್ವೆ, ಅಕ್ಟೋಬರ್ 9ರಂದು ಬೆಳಗ್ಗೆ 11 ಗಂಟೆಗೆ ಹೊತ್ತಿಗೆ ಆಶೀಶ್ ಮಿಶ್ರಾ ವಿಚಾರಣೆ ಹಾಜರಾಗುತ್ತಾರೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.