ನವದೆಹಲಿ : ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಪುತ್ರ ಆಶಿಶ್ ಮಿಶ್ರಾ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಪ್ರಕರಣವನ್ನು ಮತ್ತೆ ವಿಚಾರಣೆ ನಡೆಸುವಂತೆ ಹೈಕೋರ್ಟ್‍ಗೆ ಸೂಚನೆ ನೀಡಿದೆ.
ಆಶಿಶ್ ಮಿಶ್ರಾ ಕಳೆದ ವರ್ಷ ಅಕ್ಟೋಬರ್ ನಲ್ಲಿ ಉತ್ತರ ಪ್ರದೇಶದ ಲಖೀಂಪುರ ಖೇರಿ ಪ್ರದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಅವರನ್ನು ಅಕ್ಟೋಬರ್ 9 ರಂದು ಬಂಧಿಸಲಾಗಿತ್ತು.
ಫೆಬ್ರವರಿ 10ರಂದು ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಾಗಿತ್ತು. ಇದೀಗ ಜಾಮಿನು ರದ್ದುಪಡಿಸಿರುವ ಸುಪ್ರೀಕೋರ್ಟ್ ಒಂದು ವಾರದೊಳಗೆ ಶರಣಾಗುವಂತೆ ಆದೇಶಿಸಿದೆ.










