ಮೂಡಿಗೆರೆ : ಲಘು ವಾಹನಗಳಿಗೆ ಚಾರ್ಮಾಡಿ ಘಾಟ್ ಸಂಚಾರ ಮುಕ್ತ…

500
firstsuddi

ಮೂಡಿಗೆರೆ : ಮಲೆನಾಡು ಭಾಗಗಳಲ್ಲಿ ಕಳೆದ ಎರಡು ತಿಂಗಳ ಹಿಂದೆ ಸುರಿದ ರಣಭೀಕರ ಮಳೆಗೆ ಚಾರ್ಮಾಡಿ ಘಾಟ್ನಲ್ಲಿ ಪದೇ ಪದೇ ಗುಡ್ಡ ಕುಸಿತ ಹಾಗೂ ಭೂ ಕುಸಿತ ಹಿನ್ನೆಲೆ, ಜಿಲ್ಲಾಡಳಿತ ಚಾರ್ಮಾಡಿ ಘಾಟ್ನಲ್ಲಿ ಘನವಾಹನಗಳ ಸಂಚಾರಕ್ಕೆ ನಿಷೇಧಿಸಿತ್ತು. ಅಲ್ಲದೇ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಿಗ್ಗೆ 6ರಿಂದ ಸಂಜೆ 6ಗಂಟೆಯವರೆಗೆ ಮಾತ್ರ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಇದೀಗ ದಿನದ 24 ಗಂಟೆಯೂ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಎಲ್ಲಾ ರೀತಿಯ ಘನ ವಾಹನ ಸಂಚಾರವನ್ನು ಮುಂದಿನ ಆದೇಶ ಬರುವವರೆಗೂ ನಿಷೇಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಆದೇಶ ಹೊರಡಿಸಿದ್ದಾರೆ.