ಬೆಳಗಾವಿ : ಕರೊನಾ ತಡೆಗೆ ಸರ್ಕಾರ ಬಿಗಿ ಲಾಕ್ ಡೌನ್ ಜಾರಿಮಾಡಿದ್ದು, ಅಗತ್ಯ ವಸ್ತುಗಳ ಖರೀದಿಗೆ ಹಾಗೂ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದರ ಮಧ್ಯೆಯೂ ಕೆಲವರು ಇದನ್ನೇ ಬಂಡವಾಳ ಮಾಡಿಕೊಂಡು ನಕಲಿ ಐಡಿ ಕಾರ್ಡ್ ಮಾರಾಟ ಮಾಡುತ್ತಿದ್ದಾರೆ. ಇಂತಹದ್ದೇ ಪ್ರಕರಣವೊಂದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಲಾಕ್ ಡೌನ್ ಜಾರಿಯನ್ನೇ ಬಂಡವಾಳ ಮಾಡಿಕೊಂಡ ಆರೋಪಿಗಳಿಬ್ಬರು ಕಾರ್ಖಾನೆಗಳು, ಹಣಕಾಸು ಸಂಸ್ಥೆಗಳು, ಕೋ-ಆಪರೇಟಿವ್ ಸೊಸೈಟಿ, ಕ್ಯಾಟರಿಂಗ್ ಹೆಸರಲ್ಲಿ ನಕಲಿ ಐಡಿ ಕಾರ್ಡ್ ಕ್ರಿಯೇಟ್ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಡೋಲ್ಕರ್ ಗಲ್ಲಿಯ ಮುಚ್ಚಂಡಿ ಪ್ರಿಂಟರ್ಸ್ ಮೇಲೆ ದಾಳಿ ಮಾಡಿದ ಡಿಸಿಪಿ ವಿಕ್ರಂ ಆಮ್ಟೆ ಅವರು ನಕಲಿ ಐಡಿ ಕಾರ್ಡ್ ಮಾಡುತ್ತಿದ್ದ ಪ್ರಿಂಟಿಂಗ್ ಪ್ರೆಸ್ ಮಾಲೀಕ ವಿಶ್ವನಾಥ್ ಮುಚ್ಚಂಡಿ, ಗ್ರಾಫಿಕ್ ಡಿಸೈನರ್ ರೋಹಿತ್ ಕುಟ್ರೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ದ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










