ಲಾಕ್ ಡೌನ್ ನಿಯಮವನ್ನು ಜನರು ಸರಿಯಾಗಿ ಪಾಲಿಸುತ್ತಿಲ್ಲ, ಮತ್ತಷ್ಟು ಬಿಗಿ ಕ್ರಮ: ಬಸವರಾಜ ಬೊಮ್ಮಾಯಿ.

125
firstsuddi

ಬೆಂಗಳೂರು : ಲಾಕ್ ಡೌನ್ ನಿಯಮಗಳನ್ನು ಜನರು ಸರಿಯಾಗಿ ಪಾಲಿಸುತ್ತಿಲ್ಲ. ಹೀಗಾಗಿ ಈಗಾಗಲೇ ಜಾರಿಯಾಗಿರುವ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಜನ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಬೈಕ್ ನಲ್ಲಿ ಐದು ಜನ ತೆರಳುತ್ತಿದ್ದರು. ಹೀಗಾಗಿ, ವಾಹನಗಳನ್ನು ಜಪ್ತಿ ಮಾಡುವ ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಾಗುವುದು. ಗ್ರಾಮಾಂತರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು 3-4 ದಿನ ನಿರಂತರವಾಗಿ ಲಾಕ್ ಡೌನ್ ಜಾರಿ ಮಾಡಿದ್ದಾರೆ. ಆದರೂ ಜನರು ಲಾಕ್ ಡೌನ್ ಗೆ ಸಹಕಾರ ಕೊಡುತ್ತಿಲ್ಲ.ಇದರಿಂದ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ತೀವ್ರ ಆರ್ಥಿಕ ಸಂಕಷ್ಟದ ಮಧ್ಯೆಯೂ ಬಡಜನರಿಗಾಗಿ ಮುಖ್ಯಮಂತ್ರಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿ ಜನರಿಗೆ ಯಾವ ರೀತಿ ಸಹಾಯ ಮಾಡಬೇಕೆಂಬ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದೂ ಹೇಳಿದ್ದಾರೆ. ಎಲ್ಲ ವಿಷಯಗಳು ಮುಖ್ಯಮಂತ್ರಿಯವರ ಗಮನದಲ್ಲಿದೆ ಎಂದು ಹೇಳಿದರು.