ಲಾಕ್‌ಡೌನ್‌ನಿಂದ ಸೋಂಕು ನಿಯಂತ್ರಣ ಆಗಲ್ಲ : ಡಾ.ಕೆ.ಸುಧಾಕರ್.

50
firstsuddi

ಬೆಂಗಳೂರು : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ಲಾಕ್ ಡೌನ್ ಮೂಲಕ ಸೋಂಕು ನಿಯಂತ್ರಣ ಆಗುವುದಿಲ್ಲ. ಎರಡು ಬಾರಿ ಲಾಕ್ ಡೌನ್ ಮಾಡಿ ಜನರಿಗೆ ಸಮಸ್ಯೆ ಆಗಿದೆ. ನಿನ್ನೆ ಮೋದಿ ಅವರು ಕೂಡಾ ಆರ್ಥಿಕ ನಷ್ಟ ಆಗದಂತೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಹೀಗಾಗಿ ಲಾಕ್ ಡೌನ್ ನಂತಹ ನಿಯಮ ಇಲ್ಲದೆ ಅಗತ್ಯ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ. ಲಸಿಕೆ ತೆಗೆದುಕೊಳ್ಳಿ, ಕೊರೊನಾ ಮಾರ್ಗಸೂಚಿ ಪಾಲನೆ ಮಾಡಿ. ಒಂದೂವರೆ ತಿಂಗಳು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದೆ. ಆದರೂ ಶೇ.5ರಿಂದ 6 ರಷ್ಟು ಮಂದಿ ಮಾತ್ರ ಆಸ್ಪತ್ರೆ ಸೇರುತ್ತಿರುವುದು ಸಮಾಧಾನದ ವಿಷಯ. ನರ್ಸ್ ಗಳು ಕೂಡಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಮತ್ತಷ್ಟು ಎಚ್ಚರಿಕೆ ಅವಶ್ಯಕತೆ ಇದೆ. ಹೆಚ್ಚು ಸೋಂಕು ಇರುವ ಜಿಲ್ಲಾಡಳಿತಗಳ ಜೊತೆ ಇಂದು ಸಭೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇಂದಿನಿಂದ ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿ ವಿಚಾರವಾಗಿ ಮಾತನಾಡಿದ ಸಚಿವರು, ಈ ತಿಂಗಳು ನಿಯಮ ಮುಂದುವರೆಯುತ್ತದೆ. ಇವತ್ತು ಎರಡನೇ ವೀಕೆಂಡ್ ಕರ್ಫ್ಯೂ ಜಾರಿ ಆಗಲಿದೆ. ಜನ ಸಹಕಾರ ನೀಡಬೇಕು. ಅನೇಕ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿದೆ. ಯಾರು ಕೂಡ ಉದಾಸೀನ ಮಾಡಬಾರದು. ರಾಜ್ಯದಲ್ಲಿ ಕೊರೊನಾ ಇನ್ನು ಪೀಕ್ ಗೆ ಹೋಗಿಲ್ಲ. ಫೆಬ್ರವರಿ ಮೊದಲ ವಾರ ಸೋಂಕು ಹೆಚ್ಚಳವಾಗುತ್ತದೆ. 3-4ನೇ ವಾರದಿಂದ ಕಡಿಮೆ ಆಗುತ್ತೆ ಅಂತ ತಜ್ಞರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.