ಬೆಂಗಳೂರು : ಇಂದಿನಿಂದ ದೇಶಾದ್ಯಂತ 4ನೇ ಹಂತದ ಲಾಕ್ಡೌನ್ ನಿಯಮ ಜಾರಿಯಾಗಲಿದ್ದು, ನಾಳೆಯಿಂದ ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಬಸ್ಗಳ ಸಂಚಾರಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅವಕಾಶ ನೀಡಿದ್ದಾರೆ. 4ನೇ ಹಂತದ ಲಾಕ್ಡೌನ್ ಕುರಿತು ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 4ನೇ ಹಂತದ ಲಾಕ್ಡೌನ್ ಮಾರ್ಗಸೂಚಿ ಹಿನ್ನೆಲೆ, ಯಾವೆಲ್ಲಾ ಚಟುವಟಿಕೆಗಳಿಗೆ ಅನುಮತಿ ನೀಡಬೇಕು, ನೀಡಬಾರದು ಎಂಬುವುದರ ಬಗ್ಗೆ ಎಲ್ಲಾ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಒಂದು ತೀರ್ಮಾನ ತೆಗೆದುಕೊಂಡಿದ್ದೇನೆ. ಕಂಟೈನ್ಮೆಂಟ್ ಜೋನ್ಗಳಲ್ಲಿ ಮತ್ತಷ್ಟು ಲಾಕ್ಡೌನ್ ಭಿಗಿಗೊಳಿಸಿತ್ತೇವೆ. ಒಂದು ವೇಳೆ ಕಾನೂನು ಬಾಹಿರವಾಗಿ ವರ್ತಿಸಿದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
• ರೆಡ್ಜೋನ್ ಹಾಗೂ ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ನಾಳೆಯಿಂದ ರಾಜ್ಯದ ಎಲ್ಲಾ ಕಡೆ ಖಾಸಗಿ ಹಾಗೂ ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಬಸ್ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಕೇವಲ 30 ಜನ ಪ್ರಯಾಣಿಕರಿಗೆ ಮಾತ್ರ ಅವಕಾಶ.
• ಅನಿವಾರ್ಯವಿದ್ದರೆ ಮಾತ್ರ ಹೊರ ರಾಜ್ಯದಿಂದ ಬರುವವರಿಗೆ ಅವಕಾಶ. ಹೊರ ರಾಜ್ಯದಿಂದ ಯಾರಾದರು ಬಂದರೆ ಅವರನ್ನು ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುವುದು. ರಾಜ್ಯದಿಂದ ಬೇರೆ ರಾಜ್ಯಕ್ಕೆ ತೆರಳಲಲು ಅವಕಾಶವಿಲ್ಲ.
• ಆಟೋ, ಟ್ಯಾಕ್ಸಿ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಚಾಲಕನನ್ನು ಹೊರತುಪಡಿಸಿ ಕೇವಲ ಇಬ್ಬರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶ.
• ನಾಳೆಯಿಂದ ಮಾಲ್, ಸಿನಿಮಾ, ಹೋಟೆಲ್ಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿಗಳನ್ನು ತೆರೆಯಬಹುದು.
• ಸರ್ಕಾರ ರೈಲುಗಳ ಸಂಚಾರಕ್ಕೆ ಅವಕಾಶ ನೀಡಿದ್ದು, ನಮ್ಮ ರಾಜ್ಯದ ಒಳಗೆ ಮಾತ್ರ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
• ಸಲೂನ್ ಶಾಪ್ ತೆರೆಯಬಹುದು.
• ಪ್ರತೀ ಭಾನುವಾರ ಯಾವುದೇ ಶಾಪ್ ಓಪನ್ ಮಾಡದೇ ಕಂಪ್ಲೀಟ್ ಲಾಕ್ಡೌನ್ ಮಾಡಬೇಕು.
• ಪಾರ್ಕ್ಗಳಲ್ಲಿ ವಾಕಿಂಗ್ ಮಾಡಲು ಅವಕಾಶ ನೀಡಲಾಗಿದ್ದು, ಬೆಳಿಗ್ಗೆ 7 ರಿಂದ 9 ಗಂಟೆ ಹಾಗೂ ಸಂಜೆ 5 ರಿಂದ 7 ಗಂಟೆ ವರೆಗೆ ಅವಕಾಶ ನೀಡಲಾಗಿದೆ.
• ಬೀದಿಬದಿ ವ್ಯಾಪಾರಕ್ಕೆ ಅವಕಾಶ.
•ಸ್ಪೋರ್ಟ್ಸ್ ಕ್ಲಬ್ಗಳಿಗೆ ಅವಕಾಶ ನೀಡಲಾಗಿದ್ದು, ಕೇವಲ ಸ್ಪರ್ಧಿಗಳು ಮಾತ್ರ ಭಾಗವಹಿಸಬೇಕು.










