ದಾವಣಗೆರೆ : ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಓಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದೆ. ಹೊರ ದೇಶಗಳಿಂದ ಬಂದವರನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಜನ ಆತಂಕ ಪಡುವ ಅಗತ್ಯವಿಲ್ಲ. ನಾವು ಈಗ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದೇವೆ. ಶಾಲಾ ಕಾಲೇಜ್ ಗಳಲ್ಲಿ ಕೋವಿಡ್ ಬಗ್ಗೆ ನಿಗಾ ವಹಿಸಿ ಅಂತಾ ಹೇಳಿದ್ದೇವೆ. ಶಾಲಾ ಕಾಲೇಜ್ ಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ ಎಂದಿದ್ದಾರೆ.
ಬುಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ಬಗ್ಗೆ ನಾವು ನಿರ್ಧಾರಕೈಗೊಳ್ಳಲು ಆಗಲ್ಲ. ಸೌತ್ ಅಫ್ರಿಕಾದಿಂದ ಬಂದ ವ್ಯಕ್ತಿ ವಿಭಿನ್ನ ಸೋಂಕಿನ ಲಕ್ಷಣ ಕಂಡುಬಂದಿದೆ. ಐಸಿಎಂಆರ್ ವರದಿಗಾಗಿ ಕಾಯುತ್ತಿದ್ದೇವೆ. ಕೇರಳದಿಂದ ಬಂದವರ ಮೇಲೆ ವಿಶೇಷ ನಿಗಾವಹಿಸಲಾಗುತ್ತದೆ. ಕೇರಳದಿಂದ ಬಂದ ಎಲ್ಲರಿಗೂ ಟೆಸ್ಟ್ ಕಡ್ಡಾಯವಾಗಿದೆ ಎಂದು ತಿಳಿಸಿದ್ಧಾರೆ.










