ಲಾರಿ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ- ಐವರ ಸ್ಥಿತಿ ಗಂಭೀರ…

64
firstsuddi

ರಾಮನಗರ: ಹಾಲಿನ ಲಾರಿ ಮತ್ತು ಕಾರಿನ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಬಳಿ ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಹೋಗ್ತಿದ್ದ ಕಾರು ನಿಯಂತ್ರಣ ತಪ್ಪಿ ಹಾಲಿನ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಕ್ಕದ ರಸ್ತೆಗೆ ಕಾರು ಉರುಳಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.