ಲೂಧಿಯಾನ ನ್ಯಾಯಾಲಯದ ಎರಡನೇ ಮಹಡಿಯಲ್ಲಿ ಸ್ಫೋಟ ; ಇಬ್ಬರು ಸಾವು, ನಾಲ್ವರಿಗೆ ಗಾಯ…

66
firstsuddi

ಚಂಡೀಗಢ: ಪಂಜಾಬ್ ನ ಲೂಧಿಯಾನ ನ್ಯಾಯಾಲಯದ ಎರಡನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಮಧ್ಯಾಹ್ನ 12:22ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಬಾತ್ರೂಮ್ ಗೋಡೆಗಳಿಗೆ ಹಾನಿಯಾಗಿದ್ದು, ಸಮೀಪದ ಕೋಣೆಗಳ ಕಿಟಕಿ ಗಾಜುಗಳು ಒಡೆದುಹೋಗಿವೆ. ಈ ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದು, ಈ ವಿಚಾರವಾಗಿ ಕೂಲಂಕಷವಾಗಿ ತನಿಖೆ ನಡೆಸುವಂತೆ ಪಂಜಾಬ್ ಪೊಲೀಸರಿಗೆ ಆದೇಶಿಸಿದ್ದಾರೆ.