ಲೂಟಿ ಹೊಡೆದಿದ್ದಕ್ಕೇ ಅವರನ್ನು ಜನರು ವಿಧಾನಸಭೆ ಚುನಾವಣೆಯಲ್ಲಿ ತಿರಸ್ಕರಿಸಿದ್ದು: ಪ್ರಲ್ಹಾದ್ ಜೋಶಿ ಹೇಳಿಕೆಗೆ ಸಿಎಂ ಕೌಂಟರ್…

40
firstsuddi

ಹಾಸನ: ಲೂಟಿ ಹೊಡೆದಿದ್ದಕ್ಕೇ ಅವರನ್ನು ಜನರು ವಿಧಾನಸಭೆ ಚುನಾವಣೆಯಲ್ಲಿ ತಿರಸ್ಕರಿಸಿದ್ದು ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಕೌಂಟರ್ ನೀಡಿದ್ದಾರೆ.

ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ ಮಾಧ್ಯಮದವರೊಂದಿಗೆ ‘ಹಿಂದೂ ದೇಗುಲಗಳನ್ನ ಲೂಟಿ ಹೊಡೆಯುತ್ತಿದ್ದಾರೆ’ ಎಂಬ ವಿಚಾರವಾಗಿ ಮಾತನಾಡಿದ ಅವರು, ಪ್ರಲ್ಹಾದ್ ಜೋಶಿಗೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಧಾರ್ಮಿಕ ದತ್ತಿ ಕಾಯ್ದೆ ಅಂಗೀಕಾರವಾಗದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಹಿಂದೂಗಳ ದೇವಸ್ಥಾನಕ್ಕೆ ಮಾತ್ರ ಬಳಸಲಾಗುತ್ತದೆ. ಬೇರೆ ಧರ್ಮದ ದೇವಾಲಯಗಳಿಗೆ ಉಪಯೋಗಿಸಲ್ಲ. ಅದಕ್ಕೆ ಈ ವಿಧೇಯಕ ತಂದರೆ ವಿರೋಧಿಸುತ್ತಿದ್ದಾರೆ ಎಂದು ಬಿಜೆಪಿಗರ ವಿರುದ್ಧ ಹರಿಹಾಯ್ದಿದ್ದಾರೆ.