ಲೋಕಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ ಬಿ.ವೈ ರಾಘವೇಂದ್ರ.

65
firstsuddi

ನವದೆಹಲಿ : ಇಂದು ಲೋಕಸಭೆಯಲ್ಲಿ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರು ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಪ್ರಾಸ್ತಾಪಿಸಿದರು.

ಪ್ರತಿಬಾರಿ ಅಡಿಕೆಗೆ ಎಲೆಚುಕ್ಕಿ ರೋಗ ಯಥೇಚ್ಛವಾಗಿ ಕಾಡುತ್ತದೆ. ಈ ಬಾರಿ ಕೂಡ ಅಡಿಕೆ ಬೆಳೆಗಾರರು ಎಲೆಚುಕ್ಕಿ ರೋಗದಿಂದಾಗಿ ಇಳುವರಿ ಕಳೆದುಕೊಂಡಿದ್ದಾರೆ. ಇದರೊಂದಿಗೆ ಬೆಲೆ ಕೂಡ ಕುಸಿತ ಕಂಡಿದೆ. ಜೊತೆಗೆ ಆಮದು ಅಡಿಕೆಯಿಂದಾಗಿ ಇಲ್ಲೇ ಬೆಳೆಯುವ ಅಡಿಕೆ ಬೆಳೆಗಾರರಿಗೆ ಹೆಚ್ಚು ಹೊಡೆತ ಬೀಳುತ್ತಿದೆ. ಹಾಗಾಗಿ ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯವನ್ನು ವಿಜಯೇಂದ್ರ ಲೋಕಸಭಾ ಅಧಿವೇಶನದ ಶೂನ್ಯ ವೇಳೆಯಲ್ಲಿ ಮಂಡಿಸಿದರು.

ದೇಶದಲ್ಲಿ ಹತ್ತು ರಾಜ್ಯಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಶಿವಮೊಗ್ಗ ಸೇರಿ 16 ಜಿಲ್ಲೆಗಳಲ್ಲಿ ರೈತರು ಅಡಿಕೆ ಬೆಳೆಯುತ್ತಾರೆ. ಕರ್ನಾಟಕದಲ್ಲಿ ಅಂದಾಜು 10 ಲಕ್ಷ ಕುಟುಂಬಗಳು ಅಡಿಕೆ ಕೃಷಿಯನ್ನೇ ಅವಲಂಭಿಸಿವೆ. ರಾಜ್ಯದಲ್ಲಿ ಶೇ.69 ರಷ್ಟು ಅಡಿಕೆ ಉತ್ಪಾದನೆಯಾಗುತ್ತಿದೆ. ಒಟ್ಟಾರೆ 16,50,000 ಮೆಟ್ರಿಕ್ ಟನ್ ಅಡಿಕೆ ಉತ್ಪಾದನೆಯಾಗುತ್ತಿದ್ದು, ಇದರಿಂದಾಗಿ ಜಿಎಸ್ಟಿ ಹಾಗೂ ಇನ್ನಿತರ ತೆರಿಗೆಗಳ ಮೂಲಕ ಸರ್ಕಾರಕ್ಕೆ 24,750 ಕೋಟಿ ರೂ. ಆದಾಯ ಬರುತ್ತಿದೆ.

ಆದರೆ ಈಗ ಅಡಿಕೆ ಬೆಳೆಗಾರರು ಅಡಿಕೆಗೆ ಕೆಲ ರೋಗಗಳಿಂದ ಇಳುವರಿ ಕಳೆದುಕೊಂಡಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರವೆಂಬಂತೆ ಮಾರುಕಟ್ಟೆಯಲ್ಲಿ ಸ್ಥಿರತೆ ಮೂಡಿಸಲು ಆಮದು ಅಡಿಕೆಯ ಮೇಲೆ ಹೆಚ್ಚಿನ ಸುಂಕ ವಿಧಿಸಬೇಕು. ಅಡಿಕೆಯನ್ನು ಕಾಡುವ ಎಲ್ಲ ರೋಗಗಳಿಗೆ ವೈಜ್ಞಾನಿಕವಾಗಿ ಔಷಧಿಯನ್ನು ಅಭಿವೃದ್ಧಿ ಪಡಿಸಿಕೊಡಬೇಕು ಎಂದು ವಿವರಿಸಿದರು.