ವಂಚನೆ ಆರೋಪ ಪ್ರಕರಣ: ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲು…

61
firstsuddi

ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆಯಿಂದ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ಎರಡನೇ ದಿನವಾದ ಇಂದು ಚೈತ್ರಾ ಅನಾರೋಗ್ಯದಿಂದ ಕುಸಿದುಬಿದ್ದಿರುವುದಾಗಿ ತಿಳಿದುಬಂದಿದೆ. ಕೂಡಲೇ ಅವರನ್ನು ಸಿಸಿಬಿ ಕಚೇರಿಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಚೈತ್ರಾಳನ್ನು ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆತರಲಾಗಿತ್ತು, ಈ ವೇಳೆ ಕುಸಿದು ಬಿದ್ದ ಚೈತ್ರಾರನ್ನು ಸ್ಟ್ರೆಚರ್ ತಂದು ಆಸ್ಪತ್ರೆ ಸಿಬ್ಬಂದಿ ಕರೆದೊಯ್ದಿದ್ದಾರೆ.

ವಂಚನೆ ಪ್ರಕರಣದಲ್ಲಿ ನಂಬರ್ ಒನ್ ಆರೋಪಿಯಾಗಿರುವ ಫೈರ್ ಬ್ರಾಂಡ್ ಭಾಷಣಕಾರ್ತಿ ಚೈತ್ರಾ ಕುಂದಾಪುರ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಹಿಂದುತ್ವದ ಪ್ರತಿಪಾದಕಿಯಾಗಿದ್ದು, ಈಗ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಆಕೆ ಈಗ ಭಾರಿ ಅಪಮಾನಕ್ಕೆ ಗುರಿಯಾಗಿರುವುದರಿಂದ ತಾನು ಈ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾಗುವುದು ಖಚಿತ ಎಂಬ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಆಕೆ ಸಾವಿಗೆ ಶರಣಾಗಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.