ವಂಚನೆ ಕೇಸ್‍ಗೆ ಟ್ವಿಸ್ಟ್ ಕೊಟ್ಟ ಮಾಜಿ ಸಚಿವ ವರ್ತೂರು ಪ್ರಕಾಶ್.

49

ಬೆಂಗಳೂರು: ವಂಚನೆ ಕೇಸ್‍ನಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ವಿಚಾರಣೆ ಬಳಿಕ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ವರ್ತೂರು ಪ್ರಕಾಶ್, ಎಸಿಪಿ ಗೀತಾ ಎದುರು ವಿಚಾರಣೆಯನ್ನು ಎದುರಿಸಿದ್ದಾರೆ. ಇದೇ ವೇಳೆ ಆರೋಪಿ ಶ್ವೇತಾ ಗೌಡ ಕೊಟ್ಟಿದ್ದ ಗಿಫ್ಟ್‍ಗಳನ್ನ ಅಂದ್ರೆ ನಗದು, ಚಿನ್ನಾಭರಣ ಎಲ್ಲವನ್ನೂ ಪೊಲೀಸರಿಗೆ ವಾಪಸ್ ಕೊಟ್ಟಿದ್ದಾರೆ. ಒಟ್ಟು 12.50 ಲಕ್ಷ ರೂ. ನಗದು, ಮೂರು ಬ್ರಾಸ್ ಲೆಟ್, 1 ಚಿನ್ನದ ಉಂಗುರವನ್ನ ಎಸಿಪಿ ಗೀತಾ ಎದುರಿಗೇ ಪೊಲೀಸರಿಗೆ ವರ್ತೂರು ಪ್ರಕಾಶ್ ಒಪ್ಪಿಸಿದ್ದಾರೆ. ಶ್ವೇತಾ ಗೌಡ ಹೀಗೆ ಮಾಡ್ತಾಳೆ ಎಂಬುದು ನನಗೆ ಗೊತ್ತಿರಲ್ಲಿಲ್ಲ, ನನಗೂ ಶ್ವೇತ ಗೌಡಳಿಗೂ ಯಾವುದೇ ಸಂಬಂಧ ಕೂಡವಿಲ್ಲ. ಗಿಫ್ಟ್ ಅಂತ ನನಗೆ ಆಕೆ ಕೆಲ ಒಡವೆ ನೀಡಿದ್ಲು ಎಂದು ಪೆÇಲೀಸರಿಗೆ ಜವಾಬು ನೀಡಿದ್ದಾರೆ. ವಿಚಾರಣೆ ಬಳಿಕ ಮಾತನಾಡಿದ ವರ್ತೂರ್ ಪ್ರಕಾಶ್, ನನಗೆ ಆಕೆ ಯಾವ ಸ್ನೇಹಿತೆಯೂ ಅಲ್ಲ. ಐದಾರು ತಿಂಗಳ ಹಿಂದೆ ಅಷ್ಟೇ ಆಕೆ ಪರಿಚಯ ಆಗಿದೆ. ನನ್ನ ಹೆಸರು ಬಳಸಿಕೊಂಡು ಚಿನ್ನಭಾರಣ ಖರೀದಿ ಮಾಡಿದ್ದಾಳೆ. ನನಗೂ ಮನಸ್ಸಿಗೆ ನೋವಾಗಿದೆ. ಚಿನ್ನದ ಅಂಗಡಿಯವರು 2 ಕೋಟಿ ರೂ. ಚಿನ್ನಭಾರಣ ಕೊಟ್ಟಿದ್ದಾರೆ, ಅದ್ಹೇಗೆ ಕೊಟ್ರು ಎಂದು ಗೊತ್ತಿಲ್ಲ. ನನ್ನ ತರ ಕೆಲ ರಾಜಕಾರಣಿಗಳ ಹೆಸರು, ಫೋಟೋ ತೆಗೆದುಕೊಂಡು ವಂಚನೆ ಮಾಡಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಎಲ್ಲಾ ಮಾಹಿತಿ ಕೊಟ್ಟಿದ್ದೀನಿ ಎಂದು ಸ್ಪಷವಾಗಿ ತಿಳಿಸಿದ್ದಾರೆ. ವಂಚಕಿ ಶ್ವೇತಾ ಪೊಲೀಸರ ವಿಚಾರಣೆ ವೇಳೆ ಹಲವು ಸ್ಪೋಟಕ ಮಾಹಿತಿಗಳು ಬಹಿರಂಗವಾಗಿದೆ. ಶ್ವೇತಾಗೌಡ ಹಾಗೂ ವರ್ತೂರು ಪ್ರಕಾಶ್‍ಗೆ ನಿಕಟ ಸಂಬಂಧವಿರುವುದು ಪತ್ತೆಯಾಗಿದೆ. ಹಲವು ಬಾರಿ ಇಬ್ಬರೂ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದಾರೆ. ಅಲ್ಲದೇ ತಿರುಪತಿಗೆ ಹೋಗಲು ಸಹ ಟಿಕೆಟ್ ಬುಕ್ ಮಾಡಿರುವುದು ಖಚಿತವಾಗಿದೆ. ಇದಕ್ಕೆ ಪೂರಕವಾಗಿ ಶ್ವೇತಾ ಮೊಬೈಲ್‍ನಲ್ಲಿ ಹಲವು ಫೋಟೋ ಸಾಕ್ಷ್ಯಗಳು ಸಿಕ್ಕಿವೆ. 3 ಚಿನ್ನದ ಅಂಗಡಿ ಮಾಲೀಕರ ಜ್ಯುವೆಲ್ಲರಿ ಶಾಪ್‍ಗೆ ಶ್ವೇತಾ ಜೊತೆ ವರ್ತೂರು ಪ್ರಕಾಶ್ ಹೋಗಿರುವುದಕ್ಕೂ ಸಾಕ್ಷಿ ಸಿಕ್ಕಿದೆ ಎಂದು ಪೊಲೀಸರಿಂದ ಮಾಹಿತಿ ತಿಳಿದುಬಂದಿದೆ. ಹೀಗೆ ಇಬ್ಬರೂ ಸೇರಿ ಕೋಟ್ಯಂತರ ರೂ. ವಂಚನೆ ಮಾಡಿದ್ದಾರೆ ಎಂಬ ಆರೋಪ ಬಹಿರಂಗವಾಗಿದೆ.