ವಂದೇ ಭಾರತ್ ಎಕ್ಸ್‌ಪ್ರೆಸ್‌, ಕಾಶಿ ದರ್ಶನ್ ರೈಲಿಗೆ ಮೋದಿ ಚಾಲನೆ…

66
firstsuddi

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದರು. ಇದಕ್ಕೂ ಮೊದಲು ಕೆಲ ಸಮಯ ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು.

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಬಳಿಕ ಪ್ರಧಾನಿಯವರು ‘ಭಾರತ್ ಗೌರವ್ ಕಾಶಿ ದರ್ಶನ್’ ರೈಲಿಗೂ ಚಾಲನೆ ನೀಡಿದರು. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಜೆ 5.20ಕ್ಕೆ ಎಂಜಿಆರ್ ಚೆನ್ನೈ ಸೆಂಟ್ರಲ್ ಸ್ಟೇಷನ್ ತಲುಪಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದು ರಾಜಧಾನಿ ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಗೆ ಬರುವ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು 2 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ.

ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬರುವ ವಾಹನಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಜೊತೆಗೆ ಮೆಜೆಸ್ಟಿಕ್ ಬರುವ ಪ್ರಯಾಣಿಕರನ್ನು ಹತ್ತಿರದ ಬಸ್ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಹಿನ್ನಲೆ ಮೆಜೆಸ್ಟಿಕ್ ಗೆ ಬರುವ ಬರುವ ಬಸ್ ಸಂಚಾರ 2 ಗಂಟೆ ಸ್ಥಗಿತ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಉಪ್ಪಾರಪೇಟೆ ಪೊಲೀಸ್ ಸ್ಟೇಷನ್ ನಿಂದ ಸಾರಿಗೆ ನಿಗಮಕ್ಕೆ ಮನವಿ ಮಾಡಲಾಗಿದೆ. ಹೀಗಾಗಿ ಪ್ರಯಾಣಿಕರು ಸಹಕರಿಸುವಂತೆ ಸಾರಿಗೆ ಇಲಾಖೆಯೂ ಮನವಿ ಮಾಡಿದೆ.