ವಕ್ಫ್ ಮಂಡಳಿ ಭೂಮಿ ಕಸಿಯುವ ಪ್ರಯತ್ನ ಮಾಡಿದೆ, ಕೂಡಲೆ ರೈತರು ಭೂ ದಾಖಲೆಗಳನ್ನು ಪರಿಶೀಲಿಸಿಕೊಳ್ಳಬೇಕು: ಆರ್.ಅಶೋಕ್.

27

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಬಿರುಸಿನ ಚಕಮಕಿ ನಡೆಯುತ್ತಿದೆ. ಚನ್ನಪಟ್ಟಣ ಉಪಚುನಾವಣೆಗೆ ಎನ್‍ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕಿಳಿದಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನಿನ್ನೆ ಚಕ್ಕರೆ ಗ್ರಾಮದಲ್ಲಿ ಪ್ರಚಾರ ನಡೆಸಿದರು. ವಕ್ಫ್ ಮಂಡಳಿ ಎಲ್ಲೆಂದರಲ್ಲಿ ಭೂಮಿ ಕಸಿಯುವ ಪ್ರಯತ್ನಗಳನ್ನು ಮಾಡಿದ್ದು, ರೈತರು ಕೂಡಲೇ ತಾಲೂಕು ಕಚೇರಿಗಳಿಗೆ ಭೇಟಿ ನೀಡಿ, ತಮ್ಮ ಭೂಮಿ ದಾಖಲೆಗಳನ್ನು ಪರಿಶೀಲಿಸಬೇಕೆಂದು ಮನವಿ ಮಾಡಿಕೊಂಡರು. ಚನ್ನಪಟ್ಟಣ ತಾಲೂಕಿನ ಯಲಿಯೂರು ಬಳಿಯ ಹಿಂದೂಗಳ ರುದ್ರಭೂಮಿಯ ಮೇಲೂ ವಕ್ಫ್ ಕಣ್ಣು ಬಿದ್ದಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡುತ್ತಾ ಬಂದಿದ್ದರೂ ರೈತರ ಭೂಮಿಗಳ ನಕಲಿ ದಾಖಲೆಗಳ ಸೃಷ್ಟಿಸುವ ಕೆಲಸ ಮಾಡಲಾಗುತ್ತಿದೆ. ಭಾರತೀಯ ಸೇನೆಗಿಂತಲೂ ವಕ್ಫ್ ಮಂಡಳಿ ಹೆಚ್ಚಿನ ಭೂಮಿ ಇದೆ ಎಂದು ಆತಂಕ ವ್ಯಕ್ತಪಡಿಸಿದರು.