ಕೇರಳ: ಕಾಂಗ್ರೆಸ್ ಮಾಜಿ ಅಧ್ಯಕ್ಷೆಯಾದ ಸೋನಿಯಾ ಗಾಂಧಿಯವರು ಬುಧವಾರ ಕೇರಳದ ವಯನಾಡುಗೆ ಭೇಟಿ ನೀಡಲಿದ್ದಾರೆ. ಅವರ ಜೊತೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾದ ಪ್ರಿಯಾಂಕ ಗಾಂಧಿ ಅವರು ಸಹ ವಯನಾಡಿಗೆ ಭೇಟಿ ನೀಡಿ ನಾಳೆಯೇ ನಾಮಪತ್ರ ಸಲ್ಲಿಸಲಿದ್ದಾರೆ, ಪ್ರಿಯಾಂಕಾ ನಾಮಪತ್ರ ಸಲ್ಲಿಸುವಾಗ ಅವರ ತಾಯಿ ಸೋನಿಯಾ ಅವರೊಂದಿಗೆ ಇರಲಿದ್ದಾರೆ. ಪ್ರಿಯಾಂಕಾ ಅವರೊಂದಿಗೆ ರಾಬರ್ಟ್ ವಾದ್ರಾ ಮತ್ತು ರಾಹುಲ್ ಗಾಂಧಿ ಕೂಡ ಇರಲಿದ್ದಾರೆ ಇದಲ್ಲದೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳು ಮತ್ತು ಇತರ ರಾಷ್ಟ್ರೀಯ ಹಿರಿಯ ಕಾಂಗ್ರೆಸ್ ನಾಯಕರು ಕೂಡ ನಾಳೇ ಕೇರಳಕ್ಕೆ ಭೇಟಿ ನೀಡಲಿದ್ದಾರೆ.
ಪ್ರಿಯಾಂಕಾ ಗಾಂಧಿಯವರ ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ಕಲ್ಪೆಟ್ಟಾದಲ್ಲಿ ರೋಡ್ ಶೋ ನಡೆಯಲಿದೆ. ಪ್ರಿಯಾಂಕಾ ಮತ್ತು ಇತರ ನಾಯಕರು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಆದರೆ ಸೋನಿಯಾ ಗಾಂಧಿ ರೋಡ್ ಶೋನಲ್ಲಿ ಭಾಗವಹಿಸಲ್ಲ.ಈ ರೋಡ್ ಶೋನ ಕೊನೆಯ ಕ್ಷಣದ ಜವಬ್ದಾರಿಗಳ ಮೇಲ್ವಿಚಾರಣೆ ನಡೆಸುತ್ತಿರುವ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಕಾಸರಗೋಡು ಲೋಕಸಭಾ ಸದಸ್ಯ ರಾಜ್ ಮೋಹನ್ ಉನ್ನಿಥಾನ್ ಅವರು ಐಎಎನ್‍ಎಸ್ ನೊಂದಿಗೆ ಮಾತನಾಡಿ, “ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮಂಗಳವಾರ ಮೈಸೂರಿಗೆ ತಲುಪಿ, ಅವತಿನ ಸಂಜೆ ಅಲ್ಲಿಂದ ನೇರವಾಗಿ ವಯನಾಡ್‍ಗೆ ಆಗಮಿಸಲಿದ್ದಾರೆ” ಎಂದು ಹೇಳಿದರು. ಸೋನಿಯಾ ಗಾಂಧಿ ಬುಧವಾರ ಕಣ್ಣೂರಿಗೆ ತಲುಪಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ವ್ಯವಸ್ಥೆಯ ಮೂಲಕ ಪ್ರಿಯಾಂಕಾ ನಾಮಪತ್ರ ಸಲ್ಲಿಸುವ ಮುನ್ನ ವಯನಾಡ್ ತಲುಪಲಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಮತ್ತು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಅವತ್ತು ವಯನಾಡ್‍ಗೆ ಬರಲಿದ್ದಾರೆ.” ಎಂದು ಉನ್ನಿಥಾನ್ ಅವರು ತಿಳಿಸಿದ್ದಾರೆ.










