ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 7 ರೂ. ಹೆಚ್ಚಳ…

64
firstsuddi

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 7 ರೂ. ಹೆಚ್ಚಿಸಿವೆ.

19 ಕೆಜಿ ಸಿಲಿಂಡರ್ ಬೆಲೆಯಲ್ಲಿ 7 ರೂಪಾಯಿ ಏರಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ 1,773 ರೂ. ಇದ್ದದ್ದು, ಈಗ 1,780 ರೂ.ಗೆ ಹೆಚ್ಚಳವಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್), ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (ಎಚ್‌ಪಿಸಿಎಲ್), ಎಲ್ಲಾ ಸರ್ಕಾರಿ ಸ್ವಾಮ್ಯದ ಕಂಪನಿಗಳು ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಬೆಲೆಗಳನ್ನು ಆಧರಿಸಿ ಅಡುಗೆ ಅನಿಲದ ಬೆಲೆಗಳನ್ನು ಮಾಸಿಕವಾಗಿ ಸರಿಹೊಂದಿಸುತ್ತವೆ.

ಈ ವರ್ಷದ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸತತ ಕಡಿತದ ನಂತರ ವಾಣಿಜ್ಯ ಎಲ್‍ಪಿಜಿಗೆ ಮೊದಲ ಬೆಲೆ ಏರಿಕೆಯಾಗಿದೆ.