ವಾರಾಣಸಿ : ಲೋಕಸಭಾ ಚುನಾವಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಎಸ್‍ಪಿ-ಬಿಎಸ್‍ಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಯೋಧ ತೇಜ್ ಬಹದ್ದೂರ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ತೇಜ್ ಬಹದ್ದೂರ್ ಅವರು ಸೇನೆಯಲ್ಲಿದ್ದಾಗ ಕಳಪೆ ಆಹಾರವನ್ನು ನೀಡುತ್ತಿದ್ದಾರೆ ಎಂಬ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿತ್ತು ಎಂದು ತಿಳಿದು ಬಂದಿದ್ದು, ಬಳಿಕ ತೇಜ್ ಬಹದ್ದೂರ್ ಸೇನೆಯಿಂದ ಅಶಿಸ್ತಿನ ಕಾರಣದಿಂದ ಅಮಾನತುಗೊಂಡಿದ್ದರು. ಈ ವಿಷಯವನ್ನು ನಾಮಪತ್ರದಲ್ಲಿ ಉಲ್ಲೇಖಿಸಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ತೇಜ್ ಬಹದ್ದೂರ್ ಅವರ ನಾಮಪತ್ರವನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.










